ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಹೃದಯಾಘಾತ

ಈ ಸುದ್ದಿಯನ್ನು ಶೇರ್ ಮಾಡಿ

Jayalalithaa

ಚೆನ್ನೈ, ಡಿ 4 : ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾಗೆ ಹೃದಯಾಘಾತವಾಗಿದೆ ಎಂದು ಅಪೋಲೋ ಆಸ್ಪತ್ರೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ಸಂಜೆ 4.30ರ ಸುಮಾರಿಗೆ, ಜಯಾ ಹೃದಯಾಘಾತಕ್ಕೆ ಒಳಗಾಗಿದ್ದಾರೆಂದು ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದು, ಆಸ್ಪತ್ರೆಯ ನುರಿತ ವೈದ್ಯರಿಂದ ಜಯಾಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಯಾಗೆ ಹೃದಯಾಘಾತವಾಗಿರುವ ಸುದ್ದಿ ಹರಿದಾಡುತ್ತಿದ್ದಂತೇ, ಅಪೋಲೋ ಆಸ್ಪತ್ರೆ ಮುಂದೆ ಭಾರಿ ಸಂಖ್ಯೆ ಅಭಿಮಾನಿಗಳು ದೌಡಾಯಿಸುತ್ತಿದ್ದು, ಆಸ್ಪತ್ರೆಯ ಮುಂದೆ ಅಭಿಮಾನಿಗಳು ಬಿಕ್ಕಿಬಿಕ್ಕಿ ಅಳುತ್ತಾ, ಓಂ ಶಕ್ತಿ ಓಂಶಕ್ತಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಈ ನಡುವೆ ಮುಂಬೈನಲ್ಲಿರುವ ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್, ಪ್ರವಾಸ ಮೊಟಕುಗೊಳಿಸಿ ಚೆನ್ನೈಗೆ ವಾಪಸ್ ಆಗುತ್ತಿದ್ದಾರೆ. ಪೊಲೀಸರು ಕಟ್ಟೆಚ್ಚರದಲ್ಲಿರುವಂತೆ ತಮಿಳುನಾಡಿನ ಎಲ್ಲಾ ಪೊಲೀಸ್ ಸ್ಟೇಷನ್ ಗಳಿಗೆ ಸೂಚಿಸಲಾಗಿದೆ.  ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ತಮಿಳುನಾಡು ರಾಜ್ಯಪಾಲರಿಗೆ ದೂರವಾಣಿ ಮೂಲಕ ಕರೆ ಮಾಡಿದ್ದು, ಜಯಾ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಅಪೋಲೋ ಆಸ್ಪತ್ರೆಯಲ್ಲಿ ಸರಕಾರದ ಹಿರಿಯ ಸಚಿವರು, ಎಐಡಿಎಂಕೆ ಮುಖಂಡರು, ಪೊಲೀಸ್ ಅಧಿಕಾರಿಗಳು ಮತ್ತು ಆಸ್ಪತ್ರೆಯ ಹಿರಿಯ ವೈದರು ತುರ್ತು ಸಭೆ ನಡೆಸುತ್ತಿದ್ದಾರೆ. ಸೆ.22ರಂದು ಮನೆಯಲ್ಲಿ ಕುಸಿದು ಬಿದ್ದ ಜಯಲಲಿತಾ ಆಸ್ಪತ್ರೆಗೆ ದಾಖಲಾಗಿದ್ದರು. ಲಂಡನ್ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದರು. ಇಂದು ಬೆಳಗ್ಗೆ ಏಮ್ಸ್ ವೈದ್ಯರು ಆಗಮಿಸಿ ಜಯಲಲಿತಾ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದರು. ಇದಾದ ಕೆಲವೇ ಗಂಟೆಯಲ್ಲಿ ಜಯಲಲಿತಾ ಆರೋಗ್ಯದಲ್ಲಿ ಏರುಪೇರಾಗಿದೆ.

12.02 > ಸಿದ್ದರಾಮಯ್ಯ ಪ್ರಾರ್ಥನೆ : 

ಅಮ್ಮನಿಗೆ ಹೃದಯಾಘಾತ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು  ಜಯಲಲಿತಾ ಅವರಿಗೆ ಹೃದಯಾಘಾತವಾದ ಸುದ್ದಿ ನನಗೆ ಆಘಾತವನ್ನುನುಮಾಡಿದೆ,ಅವರು  ಆರೋಗ್ಯವಾಗಿ ಬರಲಿ ಎಂದು  ಸಿದ್ದರಾಮಯ್ಯನವರೂ ಸಹ ಟ್ವೀಟ್ ಮಾಡಿ ಪ್ರಾರ್ಥಿಸಿದ್ದಾರೆ.


12.59 >  ಅಮ್ಮನಿಗೆ ಹೃದಯಾಘಾತ : ತಮಿಳುನಾಡಿನಾದ್ಯಂತ  ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ


11.55  > ಜಯಲಲಿತಾ ಹೃದಯಾಘಾತ ಹಿನ್ನೆಲೆಯಲ್ಲಿ : ಬೆಂಗಳೂರಿನಾದ್ಯಂತ ಹೈ ಅಲರ್ಟ್ ಘೋಷಣೆ


11.25 >  ಪ್ರಧಾನಿ ಪ್ರಾರ್ಥನೆ

ಜಯಲಲಿತಾ ‘ಅಮ್ಮ’ ಅವರು ಆದಷ್ಟು ಬೇಗ ಆರೋಗ್ಯವಾಗಿ ಬರಲಿ ಎಂದು ನಾವೆಲ್ಲಾ ಪ್ರಾರ್ಥಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ


11.30 > ರಾಹುಲ್ ಟ್ವೀಟ್

ಜಯಲಲಿತಾ ಅವರ ಆರೋಗ್ಯವಾಗಿ ಬರಲಿ ಎಂದು ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿದ್ದು, ಅವರು ಆದಷ್ಟು ಬೇಗ ಆರೋಗ್ಯವಾಗಿ ಬರಲಿ ಎಂದಿದ್ದಾರೆ


10.15 >  ಭಾರಿ ಭದ್ರತೆ 

Tami;

ತಮಿಳುನಾಡಿನ ಮುಖ್ಯಮಂತ್ರಿ, ಅಭಿಮಾನಿಗಳ ಪಾಲಿನ ‘ಅಮ್ಮ’, ಪುರಚ್ಚಿ ತಲೈವಿ ಎನಿಸಿಕೊಂಡಿದ್ದ ಜೆ ಜಯಲಲಿತಾ ಅವರಿಗೆ ಹೃದಯಾಘಾತವಾಗಿದೆ ಎನ್ನುವ ಸುದ್ದಿ ಹೊರಬೀಳುತ್ತಿದ್ದಂತೆ ಚೆನ್ನೈ ನ ಅಪೊಲೊ ಆಸ್ಪತ್ರೆಯ ಸುತ್ತ ಭಾರಿ ಭದ್ರತೆ ಒದಗಿಸಲಾಗಿದ್ದು, ಯಾವುದೇ ರೀತಿಯ ಸುಳ್ಳು ಸುದ್ದಿ ಹಬ್ಬಿಸದಂತೆ ಎಐಎಡಿಎಂಕೆ ಮನವಿ ಮಾಡಿದೆ. ಅಮ್ಮನ ಅರೋಗ್ಯ ಸ್ಥಿರವಾಗಿದೆ, ಜನರು ಆತಂಕಕ್ಕೊಳಗಾಗುವುದು ಬೇಡ ಎಂದು ಮನವಿ ಮಾಡಿದೆ.

10.10 >  ಚೆನ್ನೈ ಗೆ ರಾಜ್ಯಪಾಲರು ವಾಪಸ್

ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಹೃದಯಾಘಾತವಾದ ಸುದ್ದಿ ತಿಳಿಯುತ್ತಿದ್ದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ತಮಿಳುನಾಡಿನ ರಾಜ್ಯಪಾಲ ವಿದ್ಯಾಸಾಗರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.  ಮುಂಬೈನಲ್ಲಿರುವ ತಮಿಳುನಾಡು ನಿಯೋಜಿತ ರಾಜ್ಯಪಾಲ ವಿದ್ಯಾಸಾಗರ್ ರಾವ್, ಪ್ರವಾಸ ಮೊಟಕುಗೊಳಿಸಿ ಚೆನ್ನೈಗೆ ವಾಪಸ್ ಆಗುತ್ತಿದ್ದಾರೆ.

> ಹೈ ಅಲರ್ಟ್
ತಮಿಳುನಾಡು ಸಿಎಂ ಜಯಾಲಲಿತಾ ಅವರಿಗೆ ಇಂದು ಸಂಜೆ ಆಸ್ಪತ್ರೆಯಲ್ಲಿದ್ದಾಗಲೇ ಹೃದಯಾಘಾತವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಆಸ್ಪತ್ರೆ 2.ಕಿ.ಮೀ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಲಾಗಿದೆ. ಸ್ವತಃ ಚೆನ್ನೈ ಪೊಲೀಸ್ ಮಹಾನಿರ್ದೇಶಕರು ಅಪೋಲೋ ಆಸ್ಪತ್ರೆಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಕೇಂದ್ರದಿಂದ ಅರೆ ಸೇನಾ ಪಡೆ ಸಹ ಚೆನ್ನೈಗೆ ಆಗಮಿಸಿದೆ.

10.00 >  ಜಯಲಲಿತಾಗಾಗಿ ತಮಿಳುನಾಡಿನಾದ್ಯಂತ ಪ್ರಾರ್ಥನೆ

ಜಯಲಲಿತಾಗೆ ಹೃದಯಾಘಾತವಾಗಿರುವ ಸುದ್ದಿ ಕೇಳಿ ಆಘಾತಗೊಂಡಿರುವ ಅಭಿಮಾನಿಗಳು ಹಾಗೂ ಎಡಿಎಂಕೆ ಕಾರ್ಯಕರ್ತರು ರಾಜ್ಯದಾದ್ಯಂತ ದೇಗುಲಗಳಲ್ಲಿ ಜಯಾರ ಕ್ಷೇಮಕ್ಕಾಗಿ ಅವರ ಹೆಸರಿನಲ್ಲಿ ವಿಶೇಷ ಪೂಜೆ, ಪಾರ್ಥನೆ ಸಲ್ಲಿಸುತ್ತಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin