ಶಿವಮೊಗ್ಗ : ಮರಕ್ಕೆ ಮಾರುತಿ ವ್ಯಾನ್ ಡಿಕ್ಕಿ ಹೊಡೆದು ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

accident

ಶಿವಮೊಗ್ಗ, ಡಿ.4– ಮಾರುತಿ ವ್ಯಾನೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ಸಾಗರ ಸಮೀಪ ಸಂಭವಿಸಿದೆ. ಮೃತರನ್ನು ನೆಲಮಂಗಲದ ನಿವಾಸಿಗಳಾದ ಧನಂಜಯ್, ಜಯದೇವ್ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ.  ರಾತ್ರಿ 12 ಗಂಟೆ ಸಂದರ್ಭದಲ್ಲಿ ವೇಗವಾಗಿ ಚಲಿಸುತ್ತಿದ್ದ ವಾಹನಕ್ಕೆ ಪ್ರಾಣಿಯೊಂದು ಅಡ್ಡ ಬಂದಿದೆ. ಅದನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ವಾಹನ ಸಂಪೂರ್ಣ ನಜ್ಜು ಗುಜ್ಜಾಗಿ ಸ್ಥಳದಲ್ಲೇ ಮೂವರು ಅಸು ನೀಗಿದ್ದಾರೆ. ಇಬ್ಬರನ್ನು ಹೇಗೋ ರಕ್ಷಿಸಿ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರೆಲ್ಲರೂ ಸಿಗಂದೂರು ಕ್ಷೇತ್ರಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಕುಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin