ಜಯಲಲಿತಾ ಹೃದಯಾಘಾತದ ಸುದ್ದಿ ಕೇಳಿ ಶಾಕ್ : ಎಐಎಡಿಎಂಕೆ ಕಾರ್ಯಕರ್ತ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Jayalalithaa--14

ಚೆನ್ನೈ, ಡಿ.5- ಇಲ್ಲಿನ ಅಪಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಅವರಿಗೆ ಹೃದಯಾಘಾತವಾಯಿತು ಎಂಬ ಸುದ್ದಿಯನ್ನು ಟಿವಿಯಲ್ಲಿ ನೋಡುತ್ತಿದ್ದ ಅವರ ಅಭಿಮಾನಿ ಎಐಎಡಿಎಂಕೆ ಕಾರ್ಯಕರ್ತ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಕಡಲೂರು ಜಿಲ್ಲೆ ಸನ್ಯಾಸಿ ಪೇಟೈನಲ್ಲಿ ನಡೆದಿದೆ.  ನೀಲಕಂಠನ್ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಎಐಎಡಿಎಂಕೆ ಕಾರ್ಯಕರ್ತ ಹಾಗೂ ಜಯಲಲಿತಾ ಅವರ ಕಟ್ಟಾ ಅಭಿಮಾನಿಯಾಗಿದ್ದ ಇವರು ನಿನ್ನೆ ಜಯಲಲಿತಾ ಅವರಿಗೆ ಹೃದಯಾಘಾತವಾಗಿದ್ದ ಸುದ್ದಿಯನ್ನು ಟಿವಿಯಲ್ಲಿ ನೋಡುತ್ತಿದ್ದಂತೆ ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin