ಫನ್ವೀರ್ ಸೆಲ್ವಂ ತಮಿಳುನಾಡು ಮುಂದಿನ ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Panner-Selvam

ಚನ್ನೈ, ಡಿ.5- ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಮುಂದಿನ ಉತ್ತರಾಧಿಕಾರಿಯಾಗಿ ಫನ್ವೀರ್ ಸೆಲ್ವಂ ಅವರನ್ನು ಆಯ್ಕೆ ಮಾಡಲಾಗಿದೆ. ಹಣಕಾಸು ಸಚಿವರಾಗಿರುವ ಫನ್ವೀರ್ ಸೆಲ್ವಂ ಅವರು ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಇಂದು ನಡೆದ ತುರ್ತು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗಿದೆ.  ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಆರೋಗ್ಯ ಸುಧಾರಿಸದೆ ವೈದ್ಯರ ಕೈ ಚೆಲ್ಲಿದ ಹಿನ್ನೆಲೆಯಲ್ಲಿ ಫನ್ವೀರ್ ಸೆಲ್ವಂ ಅವರನ್ನು ತಮ್ಮ ನಾಯಕರನ್ನಾಗಿ ಎಐಎಡಿಎಂಕೆ ಪಕ್ಷದ 135 ಶಾಸಕರು ಸಹಿ ಮಾಡಿ ಸೆಲ್ವಂ ಅವರನ್ನು ಆಯ್ಕೆ ಮಾಡಿ ರಾಜಭವನಕ್ಕೆ ಕಳುಹಿಸಿಕೊಟ್ಟಿದ್ದಾರೆ. ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಿ ಜಯಲಲಿತಾ ಅವರ ಪರಮಾಪ್ತ ಫನ್ವೀರ್ ಸೆಲ್ವಂ ಅವರನ್ನು ಆಯ್ಕೆ ಮಾಡಲಾಗಿದೆ. ಕಣ್ಣೀರುಡುತ್ತಲೇ ಫನ್ವೀರ್ ಸೆಲ್ವಂ ಅವರು ತಮಿಳುನಾಡಿನ ನಾಯಕರಾಗಲು ಸಹಮತಿ ವ್ಯಕ್ತಪಡಿಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin