ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿ ಬೇರೆಯವರ ಸಾವಿಗೆ ಕಾರಣರಾಗುವವರಿಗೆ 2 ವರ್ಷ ಜೈಲು ಶಿಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

Rash-Driving-Accident

ನವದೆಹಲಿ,ಡಿ.7- ಇನ್ನು ಮುಂದೆ ಮನಸೋ ಇಚ್ಛೆ ವಾಹನಗಳನ್ನು ಚಾಲನೆ ಮಾಡಿದರೆ ಜೋಕೆ. ಏಕೆಂದರೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದಾಗಿ ತಪ್ಪು ಮಾಡಿದವರು ಶ್ರೀ ಕೃಷ್ಣನ ಜನ್ಮ ಸ್ಥಳಕ್ಕೆ ಹೋಗಬೇಕಾದೀತು.  ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್, ಉದಾಸೀನದಿಂದ ಚಾಲನೆ ಮಾಡಿ ಸಾವಿಗೆ ಕಾರಣರಾಗುವ ಸವಾರರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ತೀರ್ಪು ನೀಡಿದೆ.  ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರ ಮತ್ತು ಅಮಿತವ ರಾಯ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ಮಹತ್ವದ ತೀರ್ಪು ನೀಡಿದೆ.

2015ರಿಂದ 2016ರ ಅಕ್ಟೋಬರ್ ಅಂತ್ಯಕ್ಕೆ ದೇಶದ ವಿವಿಧೆಡೆ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿ 5 ಲಕ್ಷಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಐಪಿಸಿ ಸೆಕ್ಷನ್ 304 ಎ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಈ ಪೀಠ ಸಲಹೆ ನೀಡಿದೆ.  ದ್ವಿಚಕ್ರ ವಾಹನ ಸೇರಿದಂತೆ ಭಾರೀ ಗಾತ್ರದ ವಾಹನಗಳ ಸವಾರರು ಉದಾಸೀನವಾಗಿ ಚಾಲನೆ ಮಾಡಿ ಸಾವಿಗೆ ಕಾರಣರಾದ ಚಾಲಕರು ಇಲ್ಲವೆ ಸವಾರರನ್ನು ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ತೀರ್ಪು ಕೊಟ್ಟಿದೆ.

ಈಗಾಗಲೇ ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲಿ ಮೋಟಾರು ವಾಹನ ಕಾಯ್ದೆ 2016ರನ್ನು ತಿದ್ದುಪಡಿ ಮಾಡಿದೆ. ಈ ಕಾಯ್ದೆ ಪ್ರಕಾರ ಯಾರು ಉದಾಸೀನದಿಂದ ಚಾಲನೆ ಮಾಡಿರುತ್ತಾರೋ ಅಂಥವರಿಗೆ ಜೈಲು ಶಿಕ್ಷೆ , 50 ಸಾವಿರದಿಂದ ಒಂದು ಲಕ್ಷ ರೂ. ದಂಡ, ಶಾಶ್ವತವಾಗಿ ಚಾಲನ ಪರವಾನಗಿ(ಡಿಎಲ್) ರದ್ದುಪಡಿಸುವ ಕ್ರಮಗಳನ್ನು ಕೈಗೊಂಡಿರುವುದಾಗಿ ಅಟಾರ್ನಿ ಜನರಲ್(ಎಜಿ) ಮುಕುಲ್ ರೋಹ್ಟಗಿ ನ್ಯಾಯಾಧೀಶರ ಗಮನಕ್ಕೆ ತಂದಿದ್ದಾರೆ.  ಹೊಸ ಕಾಯ್ದೆಗೆ ತಿದ್ದುಪಡಿ ತಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸುವುದನ್ನು ಸೇರ್ಪಡೆಗೊಳಿಸಲು ಸೂಚಿಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin