ಅನಾರೋಗ್ಯದಿಂದ ಕೈದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Dead-Body

ಮೈಸೂರು,ಡಿ.7-ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ 58 ವರ್ಷದ ಮರಿಸಿದ್ದಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಸನ ಮೂಲದ ಮರಿಸಿದ್ದಪ್ಪ ಎಂಟು ವರ್ಷದಿಂದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದು , ಈಗಾಗಲೇ ಎರಡು ಬಾರಿ ಹೃದಯಾಘಾತಕ್ಕೆ ಒಳಗಾಗಿದ್ದರು. ಇಂದು ಬೆಳಗ್ಗೆ ಮೂರನೇ ಬಾರಿ ತೀವ್ರ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮರಿಸಿದ್ದಪ್ಪ ಕೊನೆಯುಸಿರೆಳೆದಿದ್ದಾನೆ. ನಗರದ ಮಂಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin