ಚಿಕಿತ್ಸೆ ನೀಡಲು ವೈದ್ಯರಿಲ್ಲದ ಸರ್ಕಾರಿ ಆಸ್ಪತ್ರೆ ಮೇಲೆ ಕಲ್ಲು ತೂರಾಟ

ಈ ಸುದ್ದಿಯನ್ನು ಶೇರ್ ಮಾಡಿ

hospital Huliyar

ಹುಳಿಯಾರು, ಡಿ.7- ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಚಿಕಿತ್ಸೆ ನೀಡಲು ವೈದ್ಯರು ಇಲ್ಲದ ಕಾರಣ ರೊಚ್ಚಿಗೆದ್ದ ಸ್ಥಳೀಯರು ಸರ್ಕಾರಿ ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಕಳೆದ ರಾತ್ರಿ ಇಲ್ಲಿ ನಡೆದಿದೆ. ಹುಳಿಯಾರಿನ ತಿಪಟೂರು ರಸ್ತೆಯಲ್ಲಿರುವ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಕಳೆದ ರಾತ್ರಿ 10.30ರ ಸಂದರ್ಭದಲ್ಲಿ ಎರಡು ಸರಕು ಸಾಗಣೆ ಆಟೋಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾಂತರಾಜು ಮತ್ತು ಹೇಮಂತಕುಮಾರ್ ಎಂಬುವರು ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಅವರನ್ನು ಸಮೀಪದಲ್ಲೇ ಇದ್ದ ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದರು. ಆದರೆ ವೈದ್ಯರು ಇಲ್ಲದೆ ಕೇವಲ ಒಬ್ಬ ನರ್ಸ್ ಮಾತ್ರ ಇದ್ದರು. ತುರ್ತು ಚಿಕಿತ್ಸೆ ಅವಶ್ಯಕತೆ ಇದ್ದರಿಂದ ಗಾಯಾಳುಗಳನ್ನು ತುಮಕೂರಿಗೆ ಕರೆದುಕೊಂಡು ಹೋಗುವಂತೆ ಸೂಚಿಸಲಾಗಿತ್ತು.

ಈ ವಿಷಯ ತಿಳಿದ ಗಾಯಾಳುಗಳ ಸಂಬಂಧಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು. ಈ ವೇಳೆ ಕೆಲ ಕಿಡಿಗೇಡಿಗಳು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ನಂತರ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನಡೆಸಿ ನಂತರ ಆ್ಯಂಬುಲೆನ್ಸ್ ಮೂಲಕ ತುಮಕೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹುಳಿಯಾರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ದಾಂಧಲೆ ನಡೆಸಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

 

Facebook Comments

Sri Raghav

Admin