ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ ಬಳಸಿ ರೂ.2,000 ವರೆಗೆ ನಡೆಸುವ ವಹಿವಾಟಿನ ಮೇಲಿನ ಸೇವಾ ತೆರಿಗೆ ರದ್ದು

ಈ ಸುದ್ದಿಯನ್ನು ಶೇರ್ ಮಾಡಿ

Cashless

ನವದೆಹಲಿ, ಡಿ.8-ಡಿಜಿಟಲ್ ವ್ಯವಹಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು 2,000 ರೂ.ಗಳ ತನಕ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ವಹಿವಾಟಿನ ಮೇಲೆ ಸೇವಾ ತೆರಿಗೆಯನ್ನು ಮನ್ನಾ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ. ಈ ಸಂಬಂಧ ಹಣಕಾಸು ಸಚಿವ ಅರುಣ್ ಜೇಟ್ಲಿ ಅಧಿಸೂಚನೆಯೊಂದನ್ನು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.  500 ಮತ್ತು 1,000 ರೂ.ಗಳ ಹಳೆ ನೋಟುಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ನಂತರ ಹೊಸ ಕರೆನ್ಸಿಗಳ ಕೊರತೆಯಿಂದಾಗಿ ಬ್ಯಾಂಕ್‍ಗಳು ಮತ್ತು ಎಟಿಎಂಗಳ ಮುಂದೆ ಉದ್ದನೆ ಸಾಲುಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin