ಇಬ್ಬರ ಜೀವ ತೆಗೆದ ಮೀನು ಊಟ

ಈ ಸುದ್ದಿಯನ್ನು ಶೇರ್ ಮಾಡಿ

Fish-01

ಬಾಗಲಕೋಟೆ, ಡಿ.9- ಮೀನು ಊಟ ಸೇವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಮಖಂಡಿ ತಾಲೂಕಿನ ಕನ್ನೋಳಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಶಿಂಧೆ ಹಾಗೂ ಅವರ ಅಳಿಯ ಅಡಿಹುಡಿ ಗ್ರಾಮದ ಮಾದೇವ ಚೌಹಾಣ್ ಮೃತಪಟ್ಟ ದುರ್ದೈವಿಗಳು. ನಿನ್ನೆ ಮಧ್ಯಾಹ್ನ ಮೀನು ಊಟ ಮಾಡಿ ಮಲಗಿದ್ದರು. ಸ್ವಲ್ಪ ಹೊತ್ತಿನಲ್ಲಿ ಹೊಟ್ಟೆ ನೋವಿನಿಂದ ಬಳಲಿದರು. ವಾಂತಿ-ಭೇದಿ ಕಾಣಿಸಿಕೊಂಡಿದ್ದರಿಂದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಬ್ಬರೂ ಸೇವಿಸಿದ್ದ ಆಹಾರವನ್ನು ತಪಾಸಣೆಗೆ ಕಳುಹಿಸಲಾಗಿದೆ. ವರದಿ ನಂತರ ಸಾವಿಗೆ ನಿಖರ ಕಾರಣವೇನೆಂಬುದು ತಿಳಿದುಬರಲಿದೆ. ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin