ಭದ್ರಾ ಅಭಯಾರಣ್ಯದಲ್ಲಿ 2 ಹುಲಿಗಳ ಶವ ಪತ್ತೆ : ವಿಷವಿಟ್ಟು ಕೊಂದ ಶಂಕೆ

ಈ ಸುದ್ದಿಯನ್ನು ಶೇರ್ ಮಾಡಿ
Tigers
ಸಾಂಧರ್ಭಿಕ ಚಿತ್ರ

ಶಿವಮೊಗ್ಗ, ಡಿ.9- ಇಲ್ಲಿನ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಎರಡು ಹುಲಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ವಿಷ ಹಾಕಿ ಹುಲಿಗಳನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಭದ್ರಾವತಿ ತಾಲೂಕಿನ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಹುಲಿಗಳ ಶವಗಳು ಕಂಡುಬಂದಿವೆ.  ಸ್ಥಳಕ್ಕೆ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಅಧಿಕಾರಿಗಳು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಅಂತ್ಯ ಸಂಸ್ಕಾರ ಮಾಡಲಾಗಿದೆ. ಅರಣ್ಯ ಇಲಾಖೆಯವರು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಹುಲಿಗಳು ಸಾವನ್ನಪ್ಪಿ ಹಲವು ದಿನಗಳಾಗಿವೆ. ಯಾವ ಕಾರಣಕ್ಕೆ ಹುಲಿಗಳನ್ನು ಕೊಲ್ಲಲಾಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin