ಅಧ್ಯಕ್ಷೀಯ ಚುನಾವಣಾ ವೇಳೆ ರಷ್ಯಾ ಹಸ್ತಕ್ಷೇಪ ಆರೋಪ : ಸೈಬರ್ ಆಕ್ರಮಣಗಳ ತನಿಖೆಗೆ ಒಬಾಮಾ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

Obama

ವಾಷಿಂಗ್ಟನ್, ಡಿ.10-ಅಧ್ಯಕ್ಷೀಯ ಚುನಾವಣಾ ವೇಳೆ ನಡೆದಿರುವ ದ್ವೇಷಪೂರಿತ ಸೈಬರ್ ದಾಳಿಗಳು ಮತ್ತು ಚಟುವಟಿಕೆಗಳ ಬಗ್ಗೆ ಸಂಪೂರ್ಣ ಪರಾಮರ್ಶೆ (ತನಿಖೆ) ನಡೆಸುವಂತೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಗುಪ್ತದಳದ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.   ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಗಳ ವೇಳೆ ರಷ್ಯಾ ಹಸ್ತಕ್ಷೇಪ ಮಾಡಿದೆ ಎಂಬ ಆರೋಪಗಳು ಮತ್ತು ರಾಜಕೀಯ ವಲಯದಲ್ಲಿ ಹೆಚ್ಚುತ್ತಿರುವ ಕಳವಳಗಳ ಹಿನ್ನಲೆಯಲ್ಲಿ ಅಧ್ಯಕ್ಷರು ಈ ಆದೇಶ ನೀಡಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.  ಅಧ್ಯಕ್ಷೀಯ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಗೆತನದಿಂದ ನಡೆದಿರುವ ಸೈಬರ್ ದಾಳಿ ಮತ್ತು ಇತರ ಚಟುವಟಿಕೆಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಬೇಹುಗಾರಿಕೆ ದಳದ ಸಿಬ್ಬಂದಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ.

ತಮ್ಮ ಅಧಿಕಾರ ಅವಧಿ ಮುಗಿಯುವ ಒಳಗೆ ಈ ವರದಿಯನ್ನು ಸಲ್ಲಿಸುವಂತೆ ಅವರು ತಿಳಿಸಿದ್ದಾರೆ ಎಂದು ವೈಟ್‍ಹೌಸ್ ಉಪ ಪತ್ರಿಕಾ ಕಾರ್ಯದರ್ಶಿ ಎರಿಕ್ ಶೂಲ್‍ಟ್ಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.   ಚುನಾವಣೆ ವೇಳೆ ಸೈಬರ್ ದಾಳಿಗಳನ್ನು ನಡೆಸುವ ಮೂಲಕ ರಷ್ಯಾ ಹಸ್ತಕ್ಷೇಪ ಮಾಡಿದೆ ಎಂಬ ವರದಿಗಳು ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಒಬಾಮ ತನಿಖೆಗೆ ಆದೇಶಿಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin