ನಿಜಲಿಂಗಪ್ಪ ಅವರ ಆದರ್ಶ ಅನುಕರಣೀಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Nijalingappa-01

ಬೆಂಗಳೂರು, ಡಿ.10-ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪ ಅವರು ದೂರದೃಷ್ಟಿಯ ನಾಯಕ. ನೀರಾವರಿ, ವಿದ್ಯುತ್ ಉತ್ಪಾದನೆಗೆ ಹೆಚ್ಚು ಒತ್ತು ಕೊಡುವ ಮೂಲಕ ರಾಜ್ಯದ ಹಿತಾಸಕ್ತಿ ಕಾಪಾಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಿಜಲಿಂಗಪ್ಪ ಅವರ 114ನೆ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆ ಅವರ ಆದರ್ಶಗಳು ನಮಗೆಲ್ಲರಿಗೂ ಅನುಕರಣೀಯ ಎಂದು ಹೇಳಿದರು. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಸಚಿವ ಸಂಪುಟದ ಮುಂದೆ ಬಂದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸರ್ಕಾರಿ ಕಚೇರಿಗಳಲ್ಲಿ ಕಡತಗಳ ವಿಲೇವಾರಿ ವಿಳಂಬವಾಗಿಲ್ಲ. ಮೂರು ತಿಂಗಳಿಗೊಮ್ಮೆ ಕಡತಗಳ ವಿಲೇವಾರಿಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು. ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್, ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಮತ್ತಿತರರು ಈ ವೇಳೆ ಹಾಜರಿದ್ದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin