ಕುಳಗೇರಿ ಕ್ರಾಸ್ ಬಳಿ ಕ್ರೂಸರ್-ಲಾರಿ ನಡುವೆ ಭೀಕರ ರಸ್ತೆ ಅಪಘಾತ : ಐವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Accident

 ಬಾಗಲಕೋಟೆ,ಡಿ.11-ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿ ಎಂಟು ಮಂದಿ ಗಂಭೀರ ಗಾಯಗೊಂಡಿರುವ ಇಂದು ಬೆಳಗ್ಗೆ ನಡೆದಿದೆ. ಭೀಮಣ್ಣ ಕಳ್ಳಿಮನಿ(45), ನಿವೃತ್ತ ಶಿಕ್ಷಕ ಮ್ಯಾಗೇರಿ(65), ಬಸವರಾಜ ಮ್ಯಾಗೇರಿ(45), ಬಾಬುಕಲ್ಯಾಣಿ(48), ಮುತ್ತುಕರೆಕಲ್ಲು(40) ಮೃತ ದುರ್ದೈವಿಗಳು.  ಇಂದು ಹುಬ್ಬಳ್ಳಿಯಲ್ಲಿ ನಡೆದ ಮಾದಿಗ ಸಮಾವೇಶಕ್ಕೆಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಿಂದ ಕ್ರೂಸರ್‍ನಲ್ಲಿ ತೆರಳುತ್ತಿದ್ದಾಗ ಕುಳಗೇರಿ ಕ್ರಾಸ್ ಬಳಿ ಅತಿವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

Bagalot
ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿ ಐವರು ಮೃತಪಟ್ಟು ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೆರೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಬಾದಾಮಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Bagalot-1

Bagalot-2

Facebook Comments

Sri Raghav

Admin