ಮೃತಪಟ್ಟ ಅಮ್ಮನ ಅಭಿಮಾನಿಗಳ ಸಂಖ್ಯೆ 470ಕ್ಕೇರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Jaya-06

ಚೆನ್ನೈ, ಡಿ.11- ಪುರುಚ್ಚಿ ತಲೈವಿ ಜಯಲಲಿತಾ ನಿಧನದಿಂದಾಗಿ ಹೃದಯಘಾತ ಮತ್ತು ಆಘಾತಕ್ಕೆ ಒಳಗಾಗಿ ಮೃತಪಟ್ಟವರ ಸಂಖ್ಯೆ 470ಕ್ಕೇರಿದೆ.  ಎಐಎಡಿಎಂಕೆ ನಾಯಕಿ ಜಯಲಲಿತಾ ಡಿ.5ರಂದು ನಿಧನರಾದ ನಂತರ ಈವರೆಗೆ ತಮಿಳುನಾಡಿನ ವಿವಿಧೆಡೆ 470ಕ್ಕೂ ಹೆಚ್ಚು ಅಭಿಮಾನಿಗಳು, ಬೆಂಬಲಿಗರು ಮತ್ತು ಕಾರ್ಯಕರ್ತರು ಆಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಣ್ಣಾಡಿಎಂಕೆ ಪಕ್ಷ ನಿನ್ನೆ ಚೆನ್ನೈನಲ್ಲಿ 280 ಮಂದಿ ಮೃತಪಟ್ಟಿರುವುದನ್ನು ದೃಢಪಡಿಸಿ 203 ಜನರ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು. ಅಲ್ಲದೆ ಮೃತರ ಕುಟುಂಬದವರಿಗೆ ತಲಾ 3 ಲಕ್ಷ ರೂ.ಗಳ ಪರಿಹಾರ ಘೋಷಿಸಿತ್ತು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin