ಜಗಳೂರು ಶಾಸಕ ರಾಜೇಶ್‍ಗೆ ಪತ್ನಿ ವಿಯೋಗ

ಈ ಸುದ್ದಿಯನ್ನು ಶೇರ್ ಮಾಡಿ

ಜಗಳೂರು,ಡಿ.12-ಶಾಸಕ ಎಚ್.ಪಿ.ರಾಜೇಶ್ ಅವರ ಪತ್ನಿ ರಂಜಿತ ಅವರು ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಅವರಿಗೆ 37 ವರ್ಷ ವಯಸ್ಸಾಗಿತ್ತು. ರಾತ್ರಿ ಇದ್ದಕ್ಕಿದ್ದಂತೆ ತೀವ್ರ ರಕ್ತದ ಒತ್ತಡ ಕಡಿಮೆಯಾಗಿತ್ತು. ಇದರಿಂದ ತೀರಾ ಬಳಲಿದ್ದ ಅವರನ್ನು ತಕ್ಷಣ ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ರಂಜಿತ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.  ಮೃತರ ಅಂತ್ಯಕ್ರಿಯೆ ಶಾಸಕರ ಸ್ವಗ್ರಾಮವಾದ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬಿದರಕೆರೆ ಗ್ರಾಮದಲ್ಲಿ ನಡೆಯಿತು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin