ವಾರ್ಧಾ ಎಫೆಕ್ಟ್ : ಬೆಂಗಳೂರಿನಲ್ಲೂ ಮಳೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Chennai-Bengaluru

ಬೆಂಗಳೂರು,ಡಿ.12-ತಮಿಳು ನಾಡು ಮತ್ತು ಆಂಧ್ರಪ್ರದೇಶದ ಮೇಲೆ ವಾರ್ದಾಹ್ ಚಂಡಮಾರುತ ಅಪ್ಪಳಿಸಿದ್ದು , ಭಾರೀ ಮಳೆಯಾಗು ತ್ತಿರುವ ಕಾರಣ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸಂಜೆ ಸಾಧಾರಣದಿಂದ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಈಗಾಗಲೇ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ವರುಣನ ಆರ್ಭಟ ಮುಂದುವರೆದಿದ್ದು , ರಾಜ್ಯದ ಮೇಲೂ ಪ್ರಭಾವ ಬೀರಲಿದ್ದು ,ವಿವಿಧೆಡೆ ಮಳೆಯಾಗುವ ಸಾಧ್ಯತೆಗಳಿವೆ.  ಬೆಂಗಳೂರು ಸೇರಿದಂತೆ ಕೆಲವೆಡೆ ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣವಿದೆ. ತಾಪಮಾನ ಕುಸಿದಿರುವ ಜೊತೆಗೆ ಸಂಜೆ ವೇಳೆಗೆ ಮಳೆಯಾಗುವುದರಿಂದ ಹವಾಮಾನದಲ್ಲಿ ವೈಪರೀತ್ಯವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin