ವಾರ್ಧಾ ಎಫೆಕ್ಟ್ : ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಜಿಟಿ ಜಿಟಿ ಮಳೆ

ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರಿನಲ್ಲಿ ಮಳೆ ಬಿದ್ದ ಪ್ರದೇಶಗಳಿಗೆ ಮೇಯರ್ ಪದ್ಮಾವತಿ ಭೇಟಿ
ಬೆಂಗಳೂರಿನಲ್ಲಿ ಮಳೆ ಬಿದ್ದ ಪ್ರದೇಶಗಳಿಗೆ ಮೇಯರ್ ಪದ್ಮಾವತಿ ಭೇಟಿ

ಬೆಂಗಳೂರು, ಡಿ.13-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ದುರ್ಬಲಗೊಂಡಿದ್ದರೂ ಕೂಡ ನಾಳೆಯವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಚಂಡಮಾರುತದ ಪರಿಣಾಮದಿಂದ ನಿನ್ನೆ ಸಂಜೆಯಿಂದಲೇ ಜಿಟಿಜಿಟಿ ಮಳೆ ಆರಂಭವಾಗಿದ್ದು, ಇಂದೂ ಕೂಡ ಮುಂದುವರೆಯಲಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಬಿದ್ದ ವರದಿಯಾಗಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರಿನ ಗೊಟ್ಟಿಗೆರೆಯಲ್ಲಿ 75 ಮಿ.ಮೀ. ವರೆಗೂ ಮಳೆ ಬಿದ್ದಿರುವ ವರದಿಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ಈ ಸಂಜೆಗೆ ತಿಳಿಸಿದರು.

ನಿನ್ನೆಯಿಂದ ಆರಂಭವಾಗಿರುವ ಮೋಡ ಕವಿದ ವಾತಾವರಣ ಹಾಗೂ ತಂಪಾದ ಗಾಳಿ ಬೀಸುವಿಕೆ ಇನ್ನೂ ಎರಡು ದಿನಗಳ ಕಾಲ ಮುಂದುವರೆಯಲಿದೆ. ಚಂಡ ಮಾರುತ ದುರ್ಬಲಗೊಂಡಿರುವುದರಿಂದ ನಾಳೆಯಿಂದ ಮಳೆ ಪ್ರಮಾಣ ಇಳಿಮುಖವಾಗಲಿದೆ. ರಾಜ್ಯದ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಉತ್ತಮ ಮಳೆಯಾದ ವರದಿಯಾಗಿದೆ ಎಂದು ಹೇಳಿದರು.
ಬರದಿಂದ ತತ್ತರಿಸಿದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ತುಸು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಇದರಿಂದ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗುವುದಿಲ್ಲ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ನಗರ, ಪಟ್ಟಣಗಳಲ್ಲಿ ನಿರಂತರವಾಗಿ ಬೀಳುತ್ತಿರುವ ಜಿಟಿ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು.

ಕೊಡೆ, ರೈನ್ ಕೋಟ್ ಬಳಸಿ ಜನರು ದೈನಂದಿನ ಕೆಲಸ ಕಾರ್ಯಗಳಿಗೆ ಹೋಗುತ್ತಿದ್ದ ದೃಶ್ಯ ಎಲ್ಲೆಡೆ ಕಂಡುಬಂದಿತು. ನಿನ್ನೆಯಿಂದ ಮಳೆ ಬೀಳುತ್ತಿದ್ದರೂ ಕೂಡ ಯಾವುದೇ ರೀತಿಯ ಹೆಚ್ಚಿನ ತೊಂದರೆಯಾದ ಬಗ್ಗೆ ಇದುವರೆಗೂ ವರದಿಯಾಗಿಲ್ಲ. ಬೆಂಗಳೂರಿನ ಕೆಲವೆಡೆ ಮಳೆಗೆ ಮರಗಳು ಮುರಿದು ಉಳಿದುಬಿದ್ದ ಬಗ್ಗೆ ವರದಿಯಾಗಿವೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin