‘ನಾನೇನು ಮಾಡಿಲ್ಲ, ನಂದೇನು ತಪ್ಪಿಲ್ಲ’ : ಮಾಜಿ ಸಚಿವ ಮೇಟಿ

ಈ ಸುದ್ದಿಯನ್ನು ಶೇರ್ ಮಾಡಿ

Meti-01

ಬೆಂಗಳೂರು, ಡಿ.14- ರಾಸಲೀಲೆ ಪ್ರಕರಣದ ಹಿನ್ನೆಲೆಯಲ್ಲಿ ಸ್ವ ಇಚ್ಚೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅಬಕಾರಿ ಸಚಿವ ಎಚ್.ವೈ.ಮೇಟಿ ಹೇಳಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಈ ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲ. ಆದರೂ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರವಾಗಬಾರದೆಂದು ರಾಜೀನಾಮೆ ನೀಡಿದ್ದೇನೆ. ಸಿಡಿಯ ಬಗ್ಗೆ ಸೂಕ್ತ ತನಿಖೆ ಮಾಡಿ ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಮೇಟಿ ಸ್ಪಷ್ಟಪಡಿಸಿದರು. ಈ ಮೊದಲು ರಾಸಲೀಲೆಯಲ್ಲಿ ನಾನು ಭಾಗಿಯಾಗಿಲ್ಲ. ಅಂತಹ ಯಾವುದೇ ಸಿಡಿ ಇಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮೇಟಿ ಮಾಧ್ಯಮಗಳಿಗೆ ಬೆನ್ನು ತೋರಿಸಿ ತೆರಳಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin