ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ : ಜಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

K.J.George

ಬೆಂಗಳೂರು, ಡಿ.14-ತಪ್ಪು ಮಾಡಿದವರು ಯಾರೇ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಮೇಟಿ ಸಿಡಿ ಬಿಡುಗಡೆ ವಿಚಾರ ಕುರಿತಂತೆ ಹೇಳಿಕೆ ನೀಡಿದ ಅವರು, ಇದಕ್ಕೆ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರು ಉತ್ತರ ಕೊಡುತ್ತಾರೆ. ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತದೆ. ನಾನು ಅಥವಾ ಇನ್ನೊಬ್ಬರು ತಪ್ಪು ಮಾಡಿದರೂ ಅದು ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು. ಮೇಟಿಯವರು ನನ್ನ ಸಹೋದ್ಯೋಗಿ. ಸಿಡಿ ಬಂದ ಮೇಲೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಅದರಂತೆ ಅವರು ಕ್ರಮ ಕೈಗೊಳ್ಳುತ್ತಾರೆ ಎಂದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin