ಕುಡುಕರಿಗೆ ‘ಸುಪ್ರೀಂ’ ಶಾಕ್ : ದೇಶದ ಎಲ್ಲ ಹೆದ್ದಾರಿಗಳಲ್ಲಿರುವ ಬಾರ್, ವೈನ್ ಶಾಪ್ ಬಂದ್..!

ಈ ಸುದ್ದಿಯನ್ನು ಶೇರ್ ಮಾಡಿ

Supreme-Court-01

ನವದೆಹಲಿ,ಡಿ.15-ಮಹತ್ವದ ಬೆಳವಣಿಗೆಯೊಂದರಲ್ಲಿ , ದೇಶದ ಎಲ್ಲ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧಗೊಳಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ನೇತೃತ್ವದ ಪೀಠವು ಈ ಆದೇಶ ಹೊರಡಿಸಿದ್ದು , ಹೆದ್ದಾರಿಗಳ 500 ಮೀಟರ್ ಅಕ್ಕಪಕ್ಕದಲ್ಲಿ ಮದ್ಯದಂಗಡಿ ಮತ್ತು ಬಾರ್ ಇರಬಾರದು ಎಂದು ಸ್ಪಷ್ಟ ಸೂಚನೆ ನೀಡಿದೆ. ಮಾರ್ಚ್ 31ರ ಬಳಿಕ ಹೆದ್ದಾರಿ ಪಕ್ಕಗಳಲ್ಲಿ ಮದ್ಯದಂಗಡಿಗಳಿಗೆ ಅವಕಾಶವಿರುವುದ್ಲಿಲ. ಹಾಲಿ ಪರವಾನಗಿ ಹೊಂದಿರುವವರಿಗೆ ಏಪ್ರಿಲ್ 1ರವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ರಸ್ತೆ ಅಪಘಾತಗಳಲ್ಲಿ ಪ್ರತಿ ವರ್ಷ 1.42 ಲಕ್ಷ ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ಆರೈವ್ ಸೇಫ್ ಎಂಬ ಸರ್ಕಾರೇತರ ಸಂಸ್ಥೆ(ಎನ್‍ಜಿಒ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಎಎಲ್) ವಿಚಾರಣೆ ನಡೆಸಿದ ಪೀಠವು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧಗೊಳಿಸಿ ಆದೇಶ ನೀಡಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin