ಮಾಸ್ತಿಗುಡಿ ದುರಂತ : ನಾಗಶೇಖರ್ ಮತ್ತು ರವಿವರ್ಮಾಗೆ ಷರತ್ತುಬದ್ಧ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

Nagashekhar-and-Ravivarma

ಬೆಂಗಳೂರು,ಡಿ.15-ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ನೀರಿನಲ್ಲಿ ಮೃತಪಟ್ಟ ಇಬ್ಬರು ಸಾಹಸ ನಟರಾದ ಅನಿಲ್ ಮತ್ತು ಉದಯ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕರು, ನಿರ್ದೇಶಕರು ಹಾಗೂ ಫೈಟ್ ಮಾಸ್ಟರ್‍ಗೆ ರಾಮನಗರ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಚಿತ್ರೀಕರಣ ವೇಳೆ ಮುಂಜಾಗ್ರತೆ ಕ್ರಮ ಕೈಗೊಳ್ಳದೆ ಲೋಪ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿ ತಾವರೆಕೆರೆ ಪೊಲೀಸರು ನಿರ್ದೇಶಕ ನಾಗಶೇಖರ್, ನಿರ್ಮಾಪಕ ನಾಗೇಂದ್ರ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದರು.  ಜಾಮೀನು ಕೋರಿ ಇವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಎರಡು ಬಾರಿ ಕಸ್ಟಡಿ ಅವಧಿ ವಿಸ್ತರಿಸಿದ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.

Eesanje News App

Facebook Comments

Sri Raghav

Admin