ಸಂಸತ್ ಮುಂದೆ ಟಿಪ್ಪು ಪ್ರತಿಮೆ ಸ್ಥಾಪನೆಗೆ ವಾಟಾಳ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Vatal-01

ಬೆಂಗಳೂರು, ಡಿ.15- ಆಂಗ್ಲರ ವಿರುದ್ಧ ಪ್ರಪ್ರಥಮವಾಗಿ ಹೋರಾಟ ನಡೆಸಿದ ಸ್ವಾತಂತ್ರ ಸೇನಾನಿ ಹಾಗೂ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರ ಜನ್ಮ ಜಯಂತಿಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಯಂತಿ ದಿನ ರಜೆ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದರು.  ಮೈಸೂರು ಹುಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಬ್ರಿಟೀಷರ ವಿರುದ್ಧ ಹೋರಾಡಿ ದೇಶಕ್ಕಾಗಿ ತನ್ನ ಮಕ್ಕಳನ್ನು ಒತ್ತೆಯಿಟ್ಟ ಟಿಪ್ಪು ಸುಲ್ತಾನರ ಪ್ರತಿಮೆಯನ್ನು ಸಂಸತ್ ಭವನ ಹಾಗೂ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಬೇಕೆಂದು ಒತ್ತಾಯಿಸಿದರು.

ಟಿಪ್ಪು ಹುಟ್ಟೂರಾದ ದೇವನಹಳ್ಳಿಯನ್ನು ಕಡೆಗಣಿಸಲಾಗಿದ್ದು, ಅಲ್ಲಿ ಮಾರಕ ನಿರ್ಮಾಣ ಮಾಡಬೇಕು. ಇದಕ್ಕೆ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿ ಸಮಗ್ರ ಅಭಿವೃದ್ಧಿ ಮಾಡಬೇಕೆಂದು ಹೇಳಿದರು. ಬೆಂಗಳೂರಿನ ಚಾಮರಾಜಪೇಟೆ ಹತ್ತಿರ ಇರುವ ಟಿಪ್ಪು ಅರಮನೆಯನ್ನು ಪ್ರವಾಸಿ ತಾಣವನ್ನಾಗಿಸಲು ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕೆಂದು ವಾಟಾಳ್ ಆಗ್ರಹಿಸಿದರು.

Eesanje News App

Facebook Comments

Sri Raghav

Admin