ಕಪ್ಪುಕುಳಗಳ ಬಗ್ಗೆ ನಿಮಗೆ ಮಾಹಿತಿಯಿದ್ದರೆ ಈ ಇ-ಮೇಲ್ ವಿಳಾಸಕ್ಕೆ ತಿಳಿಸಿ : ಕೇಂದ್ರ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

E-mail

ನವದೆಹಲಿ.ಡಿ.16: ನೋಟು ರದ್ದತಿ ಬಳಿಕ ಕಾಳಧನಿಕರ ಭೇಟೆಗೆ ಹತ್ತು ಹಲವು ಕ್ರಮ ಕೈಗೊಂಡಿರುವ ಸರ್ಕಾರ ಕಪ್ಪುಹಣದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಲು ಹೊಸ ಇ ಮೇಲ್ ವಿಳಾಸ blackmoneyinfo@incometax.gov.in ತೆರೆದಿದೆ. ಕಪ್ಪು ಹಣ ಹೊಂದಿದವರ ಬಗ್ಗೆ ಸಾರ್ವಜನಿಕರು ಮೇಲ್ ವಿಳಾಸಕ್ಕೆ ಮಾಹಿತಿ ನೀಡಬಹುದು ಎಂದು ಕಂದಾಯ ಕಾರ್ಯದರ್ಶಿ ಹಸ್ಮುಖ್ ಆಧ್ಯ ಅವರು ಹೇಳಿದ್ದಾರೆ.

ಮಾಹಿತಿ ನೀಡಿದವರ ಹೆಸರು ಹಾಗೂ ಮಾಹಿತಿಯನ್ನು ಬಹಿರಂಗ ಪಡಿಸದೆ ಗೌಪ್ಯವಾಗಿ ಇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ಕಪ್ಪುಹಣದ ಬಗ್ಗೆ ಮಾಹಿತಿ ನೀಡಿದವರಿಗೆ ಸೂಕ್ತ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.  ಈ ವಿಳಾಸಕ್ಕೆ ಮೇಲ್ ಮಾಡಿದರೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನಾ ಅಡಿಯಲ್ಲಿ ಇದನ್ನು ಘೋಷಿಸಲಾಗಿದೆ.

>  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin