ಜೆಡಿಎಸ್ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

jds

ಬೆಂಗಳೂರು, ಡಿ.16- ಜೆಡಿಎಸ್ ರಾಷ್ಟ್ರೀಯ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಜೆಡಿಎಸ್ ಸಲ್ಲಿಸಿದೆ. ರಾಷ್ಟ್ರೀಯ ಉಪಾಧ್ಯಕ್ಷರಾಗಿ ಶ್ರೀಪತ್‍ರಾವ್ ಸಿಂಧೆ, ಮಹಾಪ್ರಧಾನಕಾರ್ಯದರ್ಶಿ ಹಾಗೂ ವಕ್ತಾರರಾಗಿ ಕೆ.ಡ್ಯಾನಿಶ್ ಆಲಿ, ಪ್ರಧಾನಕಾರ್ಯದರ್ಶಿಗಳಾಗಿ ನೀಲಲೋಹಿತ ದಾಸಣ್ಣದಾರ್, ಎಚ್.ಕೆ.ಕುಮಾರಸ್ವಾಮಿ, ಜಫ್ರುಲ್ಲಾಖಾನ್, ಗಟ್ಟುಬಾಬು ಅವರು ನೇಮಕಗೊಂಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಜೆಡಿಎಸ್‍ನ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಸೇರಿದಂತೆ ವಿವಿಧ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ಪಟ್ಟಿಯನ್ನು ಸಲ್ಲಿಸಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಚುನಾವಣಾ ಆಯೋಗಕ್ಕೆ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ. ರಾಷ್ಟ್ರೀಯ ಪದಾಧಿಕಾರಿಗಳು, ಪಕ್ಷದ ರಾಜ್ಯಾಧ್ಯಕ್ಷರು ಸೇರಿದಂತೆ 50ಮಂದಿ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 15 ಮಂದಿಯನ್ನು ಕಾರ್ಯಕಾರಿ ಸಮಿತಿಗೆ ಆಹ್ವಾನಿತರಾಗಿ ನೇಮಕ ಮಾಡಿಕೊಳ್ಳಲಾಗಿದೆ.

>  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin