ಸಂಪುಟ ವಿಸ್ತರಣೆ ಪ್ರಸ್ತಾಪ ಸದ್ಯಕ್ಕಿಲ್ಲ, ಮೇಟಿ ಸ್ಥಾನಕ್ಕೆ ಈಗ ಯಾರನ್ನೂ ನೇಮಿಸುವುದಿಲ್ಲ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramayya

ಬೆಂಗಳೂರು, ಡಿ.16- ಸಂಪುಟ ವಿಸ್ತರಣೆ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ವೈ. ಮೇಟಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಸದ್ಯಕ್ಕೆ ಯಾರ ನೇಮಕವೂ ಇಲ್ಲ ಎಂದರು.  ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ನನ್ನ ಬಳಿ ಯಾರೂ ಬಂದಿಲ್ಲ. ನಿಮ್ಮ ಬಳಿ ಯಾರಾದರೂ ಬಂದಿದ್ದಾರೆಯೇ? ಎಂದು ಸುದ್ದಿಗಾರರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಇದಕ್ಕೂ ಮುನ್ನ ಇಂದಿರಾಗಾಂಧಿ ಸಂಗೀತ ಕಾರಂಜಿ ಸ್ಥಳದಲ್ಲಿರುವ ಸೈನಿಕರ ಸ್ಮಾರಕ ಬಳಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೈನಿಕರು ಗಡಿಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿರುವುದರಿಂದಲೇ ನಾವೆಲ್ಲ ನೆಮ್ಮದಿಯಿಂದ ಇದ್ದೇವೆ ಎಂದರು.

1971, ಡಿಸೆಂಬರ್ 16 ರಂದು ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ 93 ಸಾವಿರ ಸೈನಿಕರು ಶರಣಾದರು. ನಮ್ಮ ದೇಶದ 3,850 ಸೈನಿಕರು ಸಾವನ್ನಪ್ಪಿದರು. ರಾಜ್ಯದ 58 ಜನ ಸೈನಿಕರೂ ಕೂಡ ಹುತಾತ್ಮರಾದರು. 10 ಸಾವಿರ ಮಂದಿ ಗಾಯಗೊಂಡರು. ಅವರೆಲ್ಲರ ಆತ್ಮಕ್ಕೆ ಶಾಂತಿ ದೊರೆಯಲಿ. ಸೈನಿಕರಿಂದಲೇ ನಾವೆಲ್ಲ ಸುರಕ್ಷಿತವಾಗಿದ್ದೇವೆ. ಅವರಿಗೆ ಅಗತ್ಯವಾದ ಎಲ್ಲಾ ಸೌಲಭ್ಯ, ನೆರವು, ಗೌರವ ನೀಡುವುದು ನಮ್ಮ ಕರ್ತವ್ಯ ಎಂದು ಸಿಎಂ ಹೇಳಿದರು.

>  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin