ಎಸಿಬಿ ತಂಡದಿಂದ ಭೀಮಾನಾಯ್ಕ್ ಸೋದರಿ ಮನೆ ಪರಿಶೀಲನೆ

ಈ ಸುದ್ದಿಯನ್ನು ಶೇರ್ ಮಾಡಿ

Bheema-Naik

ಕೊಪ್ಪಳ, ಡಿ.17- ರಮೇಶ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ವಿಶೇಷ ಭೂ ಸ್ವಾಧೀನಾಧಿಕಾರಿ ಭೀಮಾನಾಯ್ಕ್ ಅವರ ಸಹೋದರಿ ನಿವಾಸಕ್ಕೆ ಎಸಿಬಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.  ನಿನ್ನೆಯಷ್ಟೆ ಭೀಮಾನಾಯ್ಕ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಎಸಿಬಿ ತಂಡದವರು ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇಂದು ಕೊಪ್ಪಳ ಜಿಲ್ಲೆ ಗಂಗಾವತಿ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ಭೀಮಾನಾಯ್ಕ್ ಸಹೋದರಿಯವರ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ತನಿಖೆಗೆ ಸಹಕರಿಸುವಂತೆ ಎಸಿಬಿ ಅಧಿಕಾರಿಗಗಳು ಸಹೋದರಿಯ ಪತಿ ಸರ್ಕಾರಿ ಶಾಲೆ ಶಿಕ್ಷಕರಾಗಿರುವ ತುಳಜಾರಾಮರಾವ್ ಅವರ ಸೇವಾವಧಿ, ಇನ್ನಿತರೆ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin