ಮಾಜಿ ಸಚಿವ ಮೇಟಿ ರಾಸಲೀಲೆ ಸಂತ್ರಸ್ಥ ಮಹಿಳೆಯಿಂದ ನಾಲ್ವರ ವಿರುದ್ಧ ದಿಢೀರ್ ದೂರು

ಈ ಸುದ್ದಿಯನ್ನು ಶೇರ್ ಮಾಡಿ

Meti-Sex-Scandal

ಬಾಗಲಕೋಟೆ, ಡಿ.18– ತೀವ್ರ ಚರ್ಚೆಗೆ ಗ್ರಾಸವಾಗಿ ಸಚಿವ ಸ್ಥಾನವನ್ನೇ ಕಳೆದುಕೊಂಡ ಎಚ್.ವೈ.ಮೇಟಿ ಅವರ ರಾಸಲೀಲೆ ಪ್ರಕರಣದ ಸಂತ್ರಸ್ಥೆ ಎನ್ನಲಾದ ಮಹಿಳೆ ದಿಢೀರ್ ದೂರು ನೀಡಿದ್ದಾರೆ. ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಡಿಎಆರ್ ಪೇದೆ ಸುಭಾಷ್ ಸೇರಿದಂತೆ ನಾಲ್ವರ ವಿರುದ್ಧ ಪ್ರಾಣ ಬೆದರಿಕೆ ಇದೆ ಎಂದು ದೂರಿನಲ್ಲಿ ತಿಳಿಸಿದ್ದು, ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೂ ಯಾರ ವಿರುದ್ಧವೂ ದೂರು ದಾಖಲಾಗಿರಲಿಲ್ಲ. ಇದ್ದಕ್ಕಿದ್ದಂತೆ ಸಂತ್ರಸ್ಥ ಮಹಿಳೆ ಮಾಧ್ಯಮದವರ ಕಣ್ಣುತಪ್ಪಿಸಿ ತಡರಾತ್ರಿ ನವನಗರ ಪೊಲೀಸ್ ಠಾಣೆಗೆ ಬಂದು ದೂರು ನೀಡಿ ಮತ್ತೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ರಾಸಲೀಲೆ ಪ್ರಕರಣ ಮಾಧ್ಯಮಗಳಲ್ಲಿ ಬಹಿರಂಗವಾಗುತ್ತಿದ್ದಂತೆ ಈ ಮಹಿಳೆ ಹಾಗೂ ಪೇದೆ ಸುಭಾಷ್ ನಾಪತ್ತೆಯಾಗಿದ್ದರು. ಸುಭಾಷ್ ಇನ್ನೂ ಎಲ್ಲಿದ್ದಾರೆ ಎಂಬುದು ತಿಳಿದು ಬಂದಿಲ್ಲ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಪ್ರಕರಣದಲ್ಲಿ ಹೆಸರು ಕೇಳಿ ಬಂದವರನ್ನು ವಿಚಾರಣೆಗೆ ಒಳಪಡಿಸಲು ಸಿಐಡಿ ಮುಂದಾಗುತ್ತಿರುವ ಸಂದರ್ಭದಲ್ಲಿ ಮಹಿಳೆ ದಿಢೀರ್ ದೂರು ಕೊಟ್ಟಿರುವುದು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಆರ್‍ಟಿಐ ಕಾರ್ಯಕರ್ತ ರಾಜಶೇಖರ ಮಲಾಲಿ, ಸುಭಾಷ್ ಮುಗುಳಕೋಡ, ಸಂತ್ರಸ್ಥ ಮಹಿಳೆ ಸೇರಿದಂತೆ ಈ ಪ್ರಕರಣದಲ್ಲಿ ಇರುವವರ ವಿಚಾರಣೆಯನ್ನು ಸಿಐಡಿ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಬ್ಲಾಕ್‍ಮೇಲ್ ತಂತ್ರ ಅಡಿಗಿದೆಯೇ, ಪ್ರಕರಣವನ್ನು ದುರುಪಯೋಗ ಪಡಿಸಿಕೊಂಡು ಹಣ ವಸೂಲಿ ಮಾಡಲಾಗಿದೆಯೇ ಮುಂತಾದ ಸಂಶಯಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin