ಚಿತ್ರದುರ್ಗ : ಕಾರು-ಲಾರಿ ನಡುವೆ ಡಿಕ್ಕಿ, ಇಬ್ಬರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Accident-01

ಚಿತ್ರದುರ್ಗ, ಡಿ.19- ಕಾರು-ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಯಲ್ಲದಕೆರೆ ಬಳಿ ನಡೆದಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ಸೀನಪ್ಪ ಹಾಗೂ ತಮ್ಮಣ್ಣ ಮೃತ ದುರ್ದೈವಿಗಳು. ಇವರು ಕುಟುಂಬ ಸಮೇತ ಯಲ್ಲದಕೆರೆ ಬಳಿ ಇರುವ ದಾಳಿಂಬೆ ತೋಟಕ್ಕೆ ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಎದುರಿಗೆ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Accident-02

Facebook Comments

Sri Raghav

Admin