ಉಚಿತ ಆರೋಗ್ಯ ಚಿಕಿತ್ಸಾ ಸೌಲಭ್ಯ ಪಡಿಯಿರಿ

ಈ ಸುದ್ದಿಯನ್ನು ಶೇರ್ ಮಾಡಿ

doctor

ಅರಸೀಕೆರೆ, ಡಿ.20- ಸರಕಾರದ ವತಿಯಿಂದ ದೊರೆಯುವ ಉಚಿತ ಆರೋಗ್ಯ ಚಿಕಿತ್ಸೆ ಸೌಲಭ್ಯವನ್ನು ಜನ ಸಾಮಾನ್ಯರು ಬಳಸಿಕೊಳ್ಳುವ ಮೂಲಕ ಆರೋಗ್ಯಪೂರ್ಣ ಜೀವನ ನಡೆಸುವಂತೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾಬಾಯಿ ಚಂದ್ರನಾಯಕ್ ಹೇಳಿದರು. ಆರೋಗ್ಯ ಸುರಕ್ಷಾ ಟ್ರಸ್ಟ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಆರೋಗ್ಯ ಅಭಿಯಾನಕ್ಕ ಜನ ಜಾಗೃತ ಕಲಾ ಜಾಥಾಕ್ಕೆ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಚಾಲನೆ ನೀಡಿ ಮಾತನಾಡಿದರು.ವಾಜಪೇಯಿ ಆರೋಗ್ಯ ಶ್ರೀ, ರಾಜೀವ್ ಆರೋಗ್ಯ ಭಾಗ್ಯ, ರಾಷ್ಟ್ರೀಯ ಸ್ವಾಸ್ಥ್ಯ ಭಿಮಾ ಯೋಜನೆ ಸೇರಿದಂತೆ ಬಡವರ ಆರೋಗ್ಯ ಸುರಕ್ಷತೆಗಾಗಿ ಸರಕಾರ ಹತ್ತಾರು ಯೋಜನೆಯನ್ನು ರೂಪಿಸಿದ್ದು ಜನತೆ ಇದರ ಸದುಪಯೋಗಪಡೆದು ಕೊಳ್ಳುವಂತೆ ಸಲಹೆ ನೀಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಲಭ್ಯವಿರುವ ಆರೋಗ್ಯ ಚಿಕಿತ್ಸಾ ಸೌಲಭ್ಯಗಳ ಹಾಗೂ ವಿಶೇಷ ಆರೋಗ್ಯ ತಪಾಸಣಾ ಮಾಹಿತಿ ನೀಡುವ ಆರೋಗ್ಯ ಜಾಗೃತಿ ಅಭಿಯಾನ ತಾಲೂಕಿನಲ್ಲಿ 24 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಆರೋಗ್ಯ ತಪಾಸಣಾ ಶಿಬಿರ 26ರವರೆಗೂ ನಡೆಯಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಬೀದಿ ನಾಟಕ, ಸಂಗೀತ, ಸಾಕ್ಷ್ಯ ಚಿತ್ರ ಪ್ರದರ್ಶನಗಳ ಮೂಲಕ ಆರೋಗ್ಯ ಅಭಿಯಾನದ ಬಗ್ಗೆ ಅರಿವು ಮೂಡಿಸಲಾಗುತ್ತದೆ ಮತ್ತು ಆರೋಗ್ಯ ತಪಾಸಣಾ ಕಾರ್ಡ್‍ಗಳನ್ನು ನೀಡಲಾಗುತ್ತದೆ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ವಿನೋದ ಚಂದ್ರ, ತಾಲ್ಲೂಕು ವೈದ್ಯಾಧಿಕಾರಿ ಡಾ.ನಾಗಪ್ಪ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಪ್ರತಿನಿಧಿಗಳು ಹಾಜರಿದ್ದರು.

 

 Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin