ಮಲಗಿದ್ದ ಕಾಂಗ್ರೆಸ್ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murder-01141

ರಾಯಚೂರು, ಡಿ.21- ಮಲಗಿದ್ದ ಕಾಂಗ್ರೆಸ್ ಮುಖಂಡನ ಮೇಲೆರಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುರ್ಘಟನೆ ಮಾನ್ವಿ ತಾಲೂಕಿನ ಉದ್ಘಾಳ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಸಾಬನಗೌಡ (55) ಎಂದು ತಿಳಿದುಬಂದಿದ್ದು, ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮನೆಯೊಳಗೆ ಒಬ್ಬಂಟಿಯಾಗಿ ಮಲಗಿದ್ದ ಈತನ ಮೇಲೆ ಇಬ್ಬರು ದಾಳಿ ಮಾಡಿ ಕೊಂದಿದ್ದಾರೆ ಎಂದು ಶಂಕಿಸಿದ್ದಾರೆ. ಕವಿತಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin