ಅರಬ್ಬಿ ಸಮುದ್ರದಲ್ಲಿ 36,00 ಕೋಟಿ ರೂ. ವೆಚ್ಚದ ಶಿವಾಜಿ ಪ್ರತಿಮೆ ನಿರ್ಮಾಣಕ್ಕೆ ಮೋದಿ ಶಂಕು ಸ್ಥಾಪನೆ

ಈ ಸುದ್ದಿಯನ್ನು ಶೇರ್ ಮಾಡಿ

Modi-Maharashtre

ಮುಂಬೈ. ಡಿ. 24 : ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿ 36,00 ಕೋಟಿ ರೂಪಾಯಿ ವೆಚ್ಚದಲ್ಲಿ 192 ಮೀಟರ್ ಎತ್ತರದ ಮರಾಠಾ ದೊರೆ ಛತ್ರಪತಿ ಶಿವಾಜಿ ಪ್ರತಿಮೆ ನಿರ್ಮಿಸಲಾಗುತ್ತಿದ್ದು, ಪ್ರತಿಮೆ ನಿರ್ಮಾಣಕ್ಕೆ ಇಂದು ಪ್ರಧಾನಿ ಮೋದಿ ಶಂಕು ಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಧಾನಿಗೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.   ಇತಿಹಾಸದ ಪುಟಗಳಲ್ಲಿ ಅಚ್ಚಳಿಯದಂತೆ ಉಳಿದ ಸ್ವಾಭಿಮಾನಿ, ದೇಶಭಕ್ತ ಶಿವಾಜಿ ಮಹಾರಾಜ್, ಬ್ರಿಟಿಷರ ಗುಂಡಿಗೆ ನಡುಗಿಸಿದ ಸಾಮ್ರಾಟ.ಮರಾಠಾ ದೊರೆಯನ್ನು ವಿಶ್ವವಿಖ್ಯಾತನಾಗಿಸುವ ಉದ್ದೇಶದಿಂದ ಈ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುತ್ತಿದೆ.

ಮುಂಬೈನ್ ಗಿರ್ಗಾಮ್ ಚೌಪಾಯಿಲ್ಲಿ ಪ್ರತಿಮೆ ನಿರ್ಮಾಣವಾಗಲಿದ್ದು, ಶಿವಾಜಿ ಪ್ರತಿಮೆ ನಿರ್ಮಾಣವಾಗಬೇಕೆಂಬುದು ಮರಾಠಿಗರ ಮತ್ತು ಹಲವರ ಬಹುದಿನದ ಬೇಡಿಕೆಯಾಗಿತ್ತು. ಆದರೆ ಮೀನುಗಾರಿಕೆಗೆ ತೊಂದರೆಯಾಗುತ್ತದೆ ಎಂಬ ಕಾರಣ ಮುಂದಿಟ್ಟುಕೊಂಡು ಮೀನುಗಾರರು ಈ ಬೃಹತ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದು ತೀರದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಕಡಲ  ತಡಿಯಲ್ಲಿ 192 ಮೀಟರ್ ಎತ್ತರದ ಶಿವಾಜಿ ಪ್ರತಿಮೆ ನಿರ್ಮಿಸಲು ಬಿಜೆಪಿ ತೀರ್ಮಾನಿಸಿತ್ತು. ಇದು ಜಗತ್ತಿನಲ್ಲೇ ಅತಿ ಎತ್ತರದ ಪ್ರತಿಮೆಯಾಗಲಿದೆ. ಈ ಸ್ಮಾರಕ ನಿರ್ಮಾಣ ಸಾಧ್ಯವಾಗುವಂತೆ ಮಾಡಿದ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin