ಕನ್ನಡದ ಖ್ಯಾತ ಹಿರಿಯ ನಟ ಚೇತನ್ ರಾಮರಾವ್ ಇನ್ನಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Chetan-Ram-Rav

ಮೈಸೂರು, ಡಿ.24-ಚಂದನವನದ ಹಿರಿಯ ನಟ  ಚೇತನ್‍ ರಾಮರಾವ್ (72) ಇನ್ನಿಲ್ಲ. ಕನ್ನಡ ಚಿತ್ರರಂಗದಲ್ಲಿ 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ ಪೋಷಕ ಪಾತ್ರಗಳಿಗೆ ಜೀವ ತುಂಬಿದ ಚೇತನ್‍ರಾಮ್ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಖ್ಯಾತ ಚಿತ್ರನಟರಾದ ಡಾ.ರಾಜ್‍ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಜೊತೆ ಅಭಿನಯಿಸಿದ್ದ ಚೇತನ್‍ರಾಮ್ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಂದು ಬೆಳಗ್ಗೆ ಟಿ.ಕೆ.ಲೇಔಟ್ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Chetan-01

ಮೈಸೂರಿನ ತೊಣಚಿಕೊಪ್ಪಲು ನಿವಾಸಿಯಾಗಿರುವ ಚೇತನ್ ರಾಮರಾವ್ ಅವರು ಮೂತ್ರಪಿಂಡ ಹಾಗೂ ಮಂಡಿನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ನಿನ್ನೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚೇತನ್ ಅವರು ಪತ್ನಿ, ಮೂವರು ಪುತ್ರಿಯರು, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.  ಇವರು ಸುಮಾರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್ ಅಂಬರೀಶ್ ಸೇರಿದಂತೆ ಹೆಸರಾಂತ ನಟರೊಂದಿಗೆ ಅಭಿನಯಿಸಿದ್ದಾರೆ. ಅಲ್ಲದೆ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಇವರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಲಭಿಸಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin