ಜ.2ಕ್ಕೆ ಕರ್ನಾಟಕ ಬಂದ್ : ಕೇಂದ್ರ ಸರ್ಕಾರಕ್ಕೆ ವಾಟಾಳ್ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

vATAL-M
ಬೆಂಗಳೂರು, ಡಿ.28- ಕಳಸಾ-ಬಂಡೂರಿ, ಮಹದಾಯಿ ಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿರ್ಲಕ್ಷ್ಯ ವಹಿಸಿದ್ದಾರೆ. ಇದರ ವಿರುದ್ಧ ಉಗ್ರ ಚಳವಳಿ ನಡೆಸಬೇಕಾಗುತ್ತದೆ ಎಂದು ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಇಂದಿಲ್ಲಿ ಎಚ್ಚರಿಸಿದ್ದಾರೆ. ಬರಗಾಲದಿಂದ ತತ್ತರಿಸುತ್ತಿರುವ ಕರ್ನಾಟಕಕ್ಕೆ ನೆರವು ನೀಡಲು ಕೂಡ ಕೇಂದ್ರ ಸರ್ಕಾರ ಮುಂದೆ ಬರುತ್ತಿಲ್ಲ. ಪುನಃ ರಾಜ್ಯದ ಮೇಲೆ ಮಲತಾಯಿ ಧೋರಣೆ ತಳೆಯಲಾಗುತ್ತಿದೆ. ಇದರ ವಿರುದ್ಧ ಹೋರಾಟ ನಡೆಸಲು ಸಜ್ಜುಗೊಂಡಿದ್ದೇವೆ. ಡಿ.30ರೊಳಗೆ ಕ್ರಮ ಕೈಗೊಳ್ಳದಿದ್ದರೆ ಜ.2ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಜನತೆ ಬಸವಳಿದಿದ್ದಾರೆ ಆದರೂ ಇದರ ಬಗ್ಗೆ ರಾಜ್ಯವನ್ನು ಪ್ರತಿನಿಸುತ್ತಿರುವ ಬಿಜೆಪಿ ಸಂಸದರು, ಸಚಿವರು ಯಾವುದೇ ಚಕಾರವೆತ್ತುತ್ತಿಲ್ಲ. ಪ್ರಧಾನಿ ಅವರ ಬಳಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಲು ಸಾಧ್ಯವಾಗದಷ್ಟು ಅಸಕ್ತರಾಗಿದ್ದಾರೆ ಎಂದು ಕಿಡಿಕಾರಿದರು. ನಾಳೆ ಕೋಲಾರದಲ್ಲಿ ನಡೆಯಲಿರುವ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುತ್ತಿದ್ದು, ಕನ್ನಡಿಗರ ತಾಳ್ಮೆ ಪರೀಕ್ಷಿಸಿದರೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.  ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್ ಮತ್ತಿತರರ ಮುಖಂಡರು ಹಾಜರಿದ್ದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin