ನೋಟುಗಳ ರದ್ಧತಿಯಿಂದಾಗಿ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಕುಸಿತ

ಈ ಸುದ್ದಿಯನ್ನು ಶೇರ್ ಮಾಡಿ

notes-ban

ಬೆಂಗಳೂರು, ಡಿ.28-ವಾಣಿಜ್ಯ ತೆರಿಗೆ ಹಾಗೂ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಇಂದು ಸಭೆ ನಡೆಸಿದ ವೇಳೆ ಗರಿಷ್ಠ ಮುಖಬೆಲೆಯ ನೋಟುಗಳ ರದ್ಧತಿಯಿಂದಾಗಿ ತೆರಿಗೆ ಸಂಗ್ರಹದಲ್ಲಿ ಗಣನೀಯ ಇಳಿಕೆಯಾಗಿರುವ ಬಗ್ಗೆ ಅಕಾರಿಗಳು ಗಮನಸೆಳೆದರು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ 83 ಸಾವಿರ ಕೋಟಿ ಸ್ವಂತ ತೆರಿಗೆ ಸಂಗ್ರಹದಲ್ಲಿ ಸಾಕಷ್ಟು ಇಳಿಮುಖವಾಗಿದೆ. ಈ ಗುರಿ ತಲುಪಲು ಮಾಸಿಕ 6.50 ಕೋಟಿ ಸಂಗ್ರಹವಾಗಬೇಕಿದ್ದರೂ ಕಳೆದ ಎರಡು ತಿಂಗಳಲ್ಲಿ ಈ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ವಾಣಿಜ್ಯ ತೆರಿಗೆ, ನೋಂದಣಿ ಮುದ್ರಾಂಕ ಸೇರಿದಂತೆ ಇತರೆ ತೆರಿಗೆಗಳ ಸಂಗ್ರಹದಲ್ಲಿ ಸಾಕಷ್ಟು ಕುಸಿತವಾಗಿದೆ. ಆದಾಯ ಸಂಗ್ರಹದಲ್ಲೂ ಸಾಕಷ್ಟು ಹಿನ್ನಡೆಯಾಗಿದ್ದು, ಈ ಬಗ್ಗೆ ತೆರಿಗೆ ಸಂಗ್ರಹದಲ್ಲಿನ ಈ ನ್ಯೂನ್ಯತೆ ಸರಿಪಡಿಸಲು ಕೈಗೊಳ್ಳಬೇಕಾದ ಪರ್ಯಾಯ ಕ್ರಮಗಳ ಬಗ್ಗೆ ಗಂಭೀರ ಸಮಾಲೋಚನೆ ನಡೆಸಲಾಯಿತು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin