ವೃದ್ದೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದವನಿಗೆ ಜೀವಾವಧಿ ಶಿಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

Jail-01

ನಾಗಪಟ್ಟಣಂ,ಡಿ.28-ಎಂಭತ್ತು ವರ್ಷದ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ಅಪರಾಧಿಗೆ  ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇಂದು ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯವು ಅಪರಾಧಿಗೆ ಒಂದು ಸಾವಿರ ರೂ. ದಂಡ ವಿಧಿಸಿ, ವೃದ್ಧೆಗೆ ಎರಡು ಲಕ್ಷ ರೂ. ಪರಿಹಾರ ಒದಗಿಸುವಂತೆ ಆದೇಶ ನೀಡಿದೆ.
ವೆಲಿಪಾಲಯಂ ಮೂಲದ ಚಂದ್ರಶೇಖರ್ ಎಂಬಾತ 2016, ಫೆಬ್ರವರಿ 6ರಂದು ದೇವಾಲಯದ ಆವರಣದಲ್ಲಿ ವೃದ್ಧೆಗೆ ಕಪಾಳ ಮೋಕ್ಷ ಮಾಡಿ, ಆಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ವೃದ್ಧೆಯನ್ನು ನಾಗಪಟ್ಟಣಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಸಂಬಂಧ ವೃದ್ದೆಯ ಪುತ್ರಿ ಪೊಲೀಸ್ ಠಾಣೆಗೆ ಆರೋಪಿ ಚಂದ್ರಶೇಖರ್ ವಿರುದ್ದ ದೂರು ದಾಖಲಿಸಿದ್ದರು.  ಇಂದು ತೀರ್ಪು ನೀಡಿದ ಜಿಲ್ಲಾ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin