ಉಗ್ರರ ದಾಳಿ : ಇಬ್ಬರು ಯೋಧರಿಗೆ ತೀವ್ರ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Firing-In-border

ಶ್ರೀನಗರ, ಡಿ.29- ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಯೋಧರು ತೀವ್ರ ಗಾಯಗೊಂಡಿರುವ ಘಟನೆ ಉತ್ತರ ಕಾಶ್ಮೀರದ ಬಂಡೀಪೊರಾದಲ್ಲಿ ನಡೆದಿದೆ. ಹಾಜಿನ್ ಪ್ರದೇಶದ ಶಾಗುಂದ್ ಗ್ರಾಮದಲ್ಲಿ ಉಗ್ರಗಾಮಿಗಳು ಇರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಇಂದು ಮುಂಜಾನೆ ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಆಗ ಅವಿತಿಟ್ಟುಕೊಂಡಿದ್ದ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು.
ಈ ದಾಳಿಯಲ್ಲಿ ನಾಯಕ್ ಮದನ್‍ಸಿಂಗ್ ಮತ್ತು ಸಿಪಾಯಿ ಎಚ್.ಕೃಷ್ಣ ತೀವ್ರ ಗಾಯಗೊಂಡರು. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಉಗ್ರರು ಪರಾರಿಯಾದರೆಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin