ಮೂವರು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ACB

ಬೆಂಗಳೂರು, ಡಿ.29- ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ಮೂವರು ಸರ್ಕಾರಿ ಹಿರಿಯ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭೂ ದಾಖಲೆ ಇಲಾಖೆಯ ಉಪ ನಿರ್ದೇಶಕ ಇ.ಪ್ರಕಾಶ್, ಬಿಬಿಎಂಪಿ ನಗರ ಯೋಜನೆ ವಿಭಾಗದ ಕಾರ್ಯಕಾರಿ ನಿರ್ದೇಶಕ ಬಿ.ಆರ್.ಮುದ್ದುರಾಜ್ ಹಾಗೂ ನಗರ ಹಾಗೂ ಗ್ರಾಮಾಂತರ ಜಿಲ್ಲೆ ಕೈಗಾರಿಕಾಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕ ಜಿ.ನಾಗರಾಜ್ ಅವರು ಹೊಂದಿದ್ದ ಅಕ್ರಮ ಸಂಪತ್ತನ್ನು ಎಸಿಬಿ ಪತ್ತೆ ಹಚ್ಚಿದೆ. ಇಂದು ಬೆಳಗ್ಗೆ ಏಕ ಕಾಲದಲ್ಲಿ ಬೆಂಗಳೂರಿನಲ್ಲಿ ಇರುವಂತಹ ಈ ಮೂವರು ಅಧಿಕಾರಿಗಳ ಮನೆಗೆ ಪ್ರತ್ಯೇಕ ತಂಡಗಳಾಗಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಇದಲ್ಲದೆ ಅವರ ಕಚೇರಿಯಲ್ಲೂ ಕೂಡ ಕೆಲ ದಾಖಲೆಗಳನ್ನು ಪರಿಶೀಲಿಸಲಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದ್ದು , ಇ.ಪ್ರಕಾಶ್ ಮೇಲೆ ಇದು ಎರಡನೆ ಬಾರಿ ದಾಳಿ ಎಂದು ತಿಳಿದು ಬಂದಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin