ಬಿಬಿಎಂಪಿಯಲ್ಲಿ ಮೈತ್ರಿ ಧರ್ಮ ಪಾಲಿಸಲು ಅಗತ್ಯ ಕ್ರಮ : ಜೆಡಿಎಸ್‍ಗೆ ಸಿಎಂ ಭರವಸೆ

ಈ ಸುದ್ದಿಯನ್ನು ಶೇರ್ ಮಾಡಿ

Siddaramiaha-01
ಬೆಂಗಳೂರು,ಡಿ.31- ಬಿಬಿಎಂಪಿಯಲ್ಲಿ ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಉಂಟಾಗಿರುವ ಭಿನ್ನಮತ ಇದೀಗ ಸಿಎಂ ಅಂಗಳ ತಲುಪಿದ್ದು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.  ಮೈತ್ರಿ ಪಕ್ಷವಾದ ಕಾಂಗ್ರೆಸ್ ವರ್ತನೆಯಿಂದ ಬೇಸತ್ತ ಜೆಡಿಎಸ್ ಬಿಬಿಎಂಪಿ ಸದಸ್ಯರು ಶಾಸಕ ಟಿ.ಎ.ಶರವಣ ನೇತೃತ್ವದಲ್ಲಿ ಬಿಬಿಎಂಪಿ ಜೆಡಿಎಸ್ ಗುಂಪಿನ ನಾಯಕಿ ರಮೀಳಾ ಉಮಾಶಂಕರ್, ವಾರ್ಡ್ ಮಟ್ಟದ ಕಾಮಗಾರಿ ಸ್ಥಾಯಿಸಮಿತಿ ಅಧ್ಯಕ್ಷ ಭದ್ರೇಗೌಡ ಮತ್ತಿತರ ಸದಸ್ಯರನ್ನೊಳಗೊಂಡ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪಾಲಿಕೆಯಲ್ಲಿ ಮೈತ್ರಿ ಧರ್ಮ ಪಾಲಿಸುವಂತೆ ಮನವಿ ಮಾಡಿಕೊಂಡಿತು.  ಮೈತ್ರಿ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿಲ್ಲ, ಜೆಡಿಎಸ್‍ನ್ನು ಯಾವುದೇ ವಿಚಾರದಲ್ಲೂ ಪರಿಗಣಿಸುತ್ತಿಲ್ಲ. ಹೀಗಾಗಿ ಮೈತ್ರಿ ಧರ್ಮ ಉಲ್ಲಂಘನೆಯಾಗಿದೆ.

ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ.  ಹೀಗಾಗಿ ನಿಮ್ಮನ್ನು ಭೇಟಿಯಾಗುವ ಸಂದರ್ಭ ಒದಗಿ ಬಂದಿದೆ. ಮತ್ತೆ ನಾವು 10 ದಿನಗಳ ಗಡುವು ನೀಡುತ್ತಿದ್ದೇವೆ. ಈ ಅವಯೊಳಗೆ ಮೈತ್ರಿ ಧರ್ಮ ಪಾಲಿಸುವಂತೆ ನೀವು ಸೂಚಿಸಬೇಕು. ಇಲ್ಲದಿದ್ದಲ್ಲಿ ನಮ್ಮ ದಾರಿ ನಾವು ನೋಡಿಕೊಳ್ಳಬೇಕಾಗುತ್ತದೆ ಎಂದು ಜೆಡಿಎಸ್ ನಿಯೋಗ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿತು.

ಈಗಾಗಲೇ ಕಸ ಮತ್ತು ನೀರಿನ ದರ ಹೆಚ್ಚಳ ಮಾಡಲಾಗಿದೆ. ಕೆಎಂಸಿ ಕಾಯ್ದೆಯ 74ನೇ ತಿದ್ದುಪಡಿ ಉಲ್ಲಂಘನೆ ಮಾಡಿ ಹೈಪವರ್ ಕಮಿಟಿ ರಚನೆ ಮಾಡುವ ಮೂಲಕ ಸ್ಥಾಯಿ ಸಮಿತಿ ಮತ್ತು ಪಾಲಿಕೆ ಸಭೆಯ ಅಕಾರ ಮೊಟಕುಗೊಳಿಸಲಾಗುತ್ತಿದೆ. ನಗರೋತ್ಥಾನ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಿಗೆ ಸ್ಥಾಯಿಸಮಿತಿ ಮತ್ತು ಪಾಲಿಕೆ ಸಭೆ ಅನುಮೋದನೆ ಅವಶ್ಯಕತೆ ಇಲ್ಲ ಎಂಬ ನಿರ್ಧಾರ ಸ್ಥಳೀಯ ಪ್ರತಿನಿಗಳಿಗೆ ಮಾರಕವಾಗಿದೆ.  ಮೈತ್ರಿ ಧರ್ಮ ಪಾಲನೆ ಭರವಸೆ ನೀಡಿ ಇದೀಗ ಸಮನ್ವಯ ಸಮಿತಿ ರಚನೆ ಮಾಡದೆ ಕಾಂಗ್ರೆಸ್ ಮುಖಂಡರೇ ತಮಗೆ ಬೇಕಾದ ನೀತಿನಿಯಮಗಳನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇದನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಹೈಪವರ್ ಸಮಿತಿ ರದ್ದುಗೊಳಿಸುವಂತೆ ಡಿಸೆಂಬರ್ 28ರವರೆಗೆ ಗಡುವು ನೀಡಿದ್ದೇವು. ಆದರೂ ಮೈತ್ರಿ ಧರ್ಮ ಪಾಲಿಸಲಾಗುತ್ತಿಲ್ಲ. ಹೀಗಾಗಿ ನೀವೇ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಜೆಡಿಎಸ್ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿಕೊಂಡರು.  ಜೆಡಿಎಸ್ ಸದಸ್ಯರ ಮನವಿಯನ್ನು ಆಲಿಸಿದ ಮುಖ್ಯಮಂತ್ರಿಗಳು ಸಮಸ್ಯೆ ಬಗೆಹರಿಸುವಂತೆ ಹಾಗೂ ಸಮನ್ವಯ ಸಮಿತಿ ರಚನೆ ಮಾಡುವಂತೆ ನಗರದ ಮೂವರು ಸಚಿವರಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin