ರಾಯಚೂರಿನಿಂದ ಹೈದರಾಬಾದ್‍ಗೆ ತೆರಳುತ್ತಿದ್ದ ಬಸ್‍ನಲ್ಲಿ ಸ್ಫೋಟಕ ವಸ್ತು ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

Explosive

ರಾಯಚೂರು, ಡಿ.31-ಬಸ್ಸೊಂದರಲ್ಲಿ ಸ್ಫೋಟಕ ವಸ್ತು ಪತ್ತೆಯಾಗಿರುವ ಘಟನೆ ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಯಚೂರಿನಿಂದ ಹೈದರಾಬಾದ್‍ಗೆ ತೆರಳುತ್ತಿದ್ದ ಬಸ್‍ನಲ್ಲಿ ಬ್ಯಾಗೊಂದರಲ್ಲಿ ಸ್ಫೋಟಕ ವಸ್ತುಗಳು ದೊರೆತಿದ್ದು, ಈ ಬಗ್ಗೆ ಶಕ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.  ರಾಯಚೂರು ಡಿಪೋದ ಈಶಾನ್ಯ ಸಾರಿಗೆ ಸಂಸ್ಥೆಗೆ ಸೇರಿದ ಈ ಬಸ್‍ನಲ್ಲಿ ಸ್ಫೋಟಕ ವಸ್ತುಗಳು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಶಕ್ತಿ ನಗರ ಬಳಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಂಬ್ ತಯಾರಿಸಲು ಬಳಸುವ ಕಚ್ಚಾವಸ್ತುಗಳನ್ನು ಈ ಬ್ಯಾಗ್ ಒಳಗೊಂಡಿತ್ತು ಎನ್ನಲಾಗಿದ್ದು, ಈ ಬ್ಯಾಗ್ ಯಾರದು ಎಂಬ ಬಗ್ಗೆ ತನಿಖೆ ಮುಂದುವರೆದಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin