ಹೊಸವರ್ಷದ ಸಂಭ್ರಮದಲ್ಲಿರುವವರಿಗೆ ಶಾಕ್ : ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳ..!

ಈ ಸುದ್ದಿಯನ್ನು ಶೇರ್ ಮಾಡಿ

Petrol-Diesel

ನವದೆಹಲಿ. ಜ.01 : ಹೊಸ ವರ್ಷಕ್ಕೆ ವಾಹನ ಸವಾರರಿಗೆ ಶಾಕಿಂಗ್ ಸುದ್ದಿಯೊಂದು ಹೊರಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿರುವ ಹಿನ್ನಲೆಯಲ್ಲಿ, ಪೆಟ್ರೋಲ್- ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದೆ. ಪೆಟ್ರೋಲ್  ಬೆಲೆಯಲ್ಲಿ ರೂ.1.29 ಮತ್ತು ಡೀಸೆಲ್ ಬೆಲೆಯಲ್ಲಿ 0.97 ರೂ. ಹೆಚ್ಚಳವಾಗಿದ್ದು ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಅನ್ವಯವಾಗಲಿದೆ. ಡಿಸೇಂಬರ್ 16 ರಂದು  ಪೆಟ್ರೋಲ್  ಬೆಲೆಯಲ್ಲಿ ರೂ.2.21 ಮತ್ತು ಡೀಸೆಲ್ ಬೆಲೆಯಲ್ಲಿ 1.79 ರೂ. ಹೆಚ್ಚಳವಾಗಿತ್ತು.   ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಈ ಸುದ್ದಿಯನ್ನು ಅರಗಿಸಿಕೊಳ್ಳುವುದು ಕಷ್ಟವಾಗಲಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಏರಿಳಿತ ಆಧರಿಸಿ, ತೈಲ ಕಂಪನಿಗಳು ಪ್ರತಿ 15 ದಿನಗಳಿಗೊಮ್ಮೆ ತೈಲ ಬೆಲೆಯನ್ನು ಪರಿಷ್ಕರಿಸುತ್ತವೆ. ಅದರಂತೆ ಪೆಟ್ರೋಲ್ ರೂ1.29 ಮತ್ತು ಡೀಸೆಲ್ ಬೆಲೆಯಲ್ಲಿ 0.97 ರೂ. ಏರಿಕೆಯಾಗಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin