2 ಭೀಕರ ಅಪಘಾತಗಳಲ್ಲಿ 9 ಮಂದಿ ಸಾವು, ಅನೇಕರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Accident-01

ಗಾರಿಯಾಬಾದ್/ಕೊಚ್ಚಿ, ಜ.2– ಛತ್ತೀಸ್‍ಗಢ್ ಮತ್ತು ಕೇರಳದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ಅಪಘಾತಗಳಲ್ಲಿ 9 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ. ಛತ್ತೀಸ್‍ಗಢ್‍ನ ಗಾರಿಯಾಬಾದ್‍ನಲ್ಲಿ ಇಂದು ಮುಂಜಾನೆ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಗಾರಿಯಾಬಾದ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.  ಕೇರಳದ ಕೊಚ್ಚಿಯಲ್ಲಿ ಬಸ್ಸೊಂದು ನಿಯಂತ್ರಣ ತಪ್ಪಿ ಕಾರು ಮತ್ತು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin