ಉತ್ತರ ಪ್ರದೇಶದಲ್ಲಿ ಭೀಭತ್ಸ ಘಟನೆ : ಒಂದೇ ಕುಟುಂಬದ 10 ಜನರ ಕಗ್ಗೊಲೆ

ಈ ಸುದ್ದಿಯನ್ನು ಶೇರ್ ಮಾಡಿ

1--Killed-01

ಅಮೇಥಿ(ಉ.ಪ್ರ.), ಜ.4-ವ್ಯಕ್ತಿಯೊಬ್ಬ ತನ್ನ ಕುಟುಂಬದ 10 ಜನರನ್ನು ಭೀಕರವಾಗಿ ಕೊಚ್ಚಿ ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಭೀಭತ್ಸ ಘಟನೆ ಉತ್ತರಪ್ರದೇಶದ ಅಮೇಥಿಯ ಮನ್ಹೋವಾ ಬಡಾವಣೆಯಲ್ಲಿ ನಡೆದಿದೆ. 45 ವರ್ಷದ ಜಮಾಲು ಎಂಬಾತ ತನ್ನ ಕುಟುಂಬದ 12 ಜನರಿಗೆ ಕೀಟನಾಶಕ ಪ್ರಾಶನ ಮಾಡಿ ನಂತರ ಅವರಲ್ಲಿ 10 ಮಂದಿಯನ್ನು ಭೀಕರವಾಗಿ ಕೊಚ್ಚಿ ಕೊಲೈಗೈದ. ಬಳಿಕ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಈ ಘಟನೆಯಲ್ಲಿ ಜಮಾಲು ಸೇರಿದಂತೆ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿರುವ ಇನ್ನಿಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.  ಕೌಟುಂಬಿಕ ಕಲಹವೇ ಈ ಘೋರ ಹತ್ಯಾಕಾಂಡಕ್ಕೆ ಕಾರಣವೆಂದು ಶಂಕಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin