ಕೇರಳದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂಗಳೂರಿನ ಒಂದೇ ಕುಟುಂಬದ ನಾಲ್ವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

accident

ಕಾಸರಗೋಡು, ಜ.4-ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಮೃತಪಟ್ಟ ದುರ್ಘಟನೆ ಇಂದು ಬೆಳಗ್ಗೆ ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳ ಬಳಿ ಸಂಭವಿಸಿದೆ. ಮಂಗಳೂರಿನಿಂದ ತ್ರಿಶೂರ್‍ಗೆ ತೆರಳುತ್ತಿದ್ದ ಕಾರು ಮತ್ತು ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಡಾ.ರಾಮನಾರಾಯಣನ್ (52), ಅವರ ಪತ್ನಿ ವತ್ಸಲಾ (48), ಮಗ ರಂಜಿತ್ (21) ಮತ್ತು ಸಂಬಂಧಿ ನಿತಿನ್(24) ಮೃತಪಟ್ಟ ದುರ್ದೈವಿಗಳು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin