ತಾರಕಕ್ಕೇರಿದ ಬಿಜೆಪಿ-ಟಿಎಂಸಿ ಸಂಘರ್ಷ : ಬಿಜೆಪಿ ನಾಯಕಿ ಮನೆ ಮೇಲೆ ಬಾಂಬ್ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

BJP-TMC

ಕೋಲ್ಕತಾ,ಜ.4- ರೋಸ್‍ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತೃಣಮೂಲ ಕಾಂಗ್ರೆಸ್ ನಾಯಕ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬಂಧಿಸಿದ ನಂತರ, ಕೋಲ್ಕತಾ ದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಂಘರ್ಷ ತಾರಕಕ್ಕೇರಿದೆ.  ಟಿಎಂಸಿ ಕಾರ್ಯಕರ್ತರು ನಿನ್ನೆ ರಾತ್ರಿ ಪಶ್ಚಿಮ ಬಂಗಾಳದ ಬಿಜೆಪಿ ನಾಯಕಿಯೊಬ್ಬರ ಮನೆ ಮೇಲೆ ಬಾಂಬ್ ದಾಳಿ ನಡೆಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡಿರುವ ಅವರು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದ್ರಿಕ್ತ ಟಿಎಂಸಿ ಕಾರ್ಯಕರ್ತರು ಕೋಲ್ಕತ್ತಾದ ಬಿಜೆಪಿ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿದ ನಂತರ ಬಿಜೆಪಿ ನಾಯಕಿ ಶ್ರೀಮತಿ ಭಟ್ಟಾಚಾರ್ಯ ಅವರ ಮನೆಗೆ ನುಗ್ಗಿದ ಟಿಎಂಸಿ ಕಾರ್ಯಕರ್ತರು ಬಾಂಬ್ ಎಸೆದು ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ. ನಿನ್ನೆ ರಾತ್ರಿ ಬಿಜೆಪಿ ಕಚೇರಿ ಬಳಿ ನಡೆದ ಘರ್ಷಣೆಯಲ್ಲಿ ಉಭಯ ಪಕ್ಷಗಳ ಹಲವು ಕಾರ್ಯಕರ್ತರು ಗಾಯಗೊಂಡಿದ್ದು, ಪರಿಸ್ಥಿತಿ ಪ್ರಕ್ಷುಬ್ದವಾಗಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin