ನಂಜನಗೂಡು ಉಪ ಚುನಾವಣೆ ಅಭ್ಯರ್ಥಿ ಆಯ್ಕೆ : ಕಾಂಗ್ರೆಸ್ ರಣತಂತ್ರ

ಈ ಸುದ್ದಿಯನ್ನು ಶೇರ್ ಮಾಡಿ

S-Siddaramaiha

ಮೈಸೂರು, ಜ.5– ನಂಜನಗೂಡು ಉಪಚುನಾವಣೆ ದಿನಾಂಕ ಯಾವುದೇ ಕ್ಷಣದಲ್ಲಿ ಘೋಷಣೆಯಾಗುವ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರಣತಂತ್ರ ರೂಪಿಸಿರುವ ಕಾಂಗ್ರೆಸ್ ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಿದೆ. ಇಲ್ಲಿನ ರಾಮಕೃಷ್ಣ ನಗರದಲ್ಲಿರುವ ಸಿಎಂ ನಿವಾಸದಲ್ಲಿ ನಂಜನಗೂಡು ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ಸಭೆ ನಡೆದಿದ್ದರ ಬಗ್ಗೆ ಸಂಸದ ಧೃವನಾರಾಯಣ್ ಅವರು ಪತ್ರಕರ್ತರೊಂದಿಗೆ ಮಾತನಾಡಿ ಸರ್ವಸಮ್ಮತ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದರು.
ಆ ಕ್ಷೇತ್ರದ ಕಾಂಗ್ರೆಸ್ ಮುಖಂಡರೊಂದಿಗೆ ಮಾತುಕತೆ ನಡೆಸಲಾಗಿದ್ದು, ಚುನಾವಣೆಗೆ ಯಾವುದೇ ಕ್ಷಣ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಜನಾಭಿಪ್ರಾಯ ಸಂಗ್ರಹಿಸಿ ಕಾಂಗ್ರೆಸ್ ಮುಖಂಡರು ಸೂಚಿಸುವ ವ್ಯಕ್ತಿಯ ಪೂರ್ವಾಪರ ನೋಡಿ ಗೆಲ್ಲುವ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸಲಾಗುವುದು ಎಂದು ಹೇಳಿದರು.  ಮಹದೇವ ಪ್ರಸಾದ್ ಅವರ ಅಕಾಲಿಕ ನಿಧನದಿಂದ ಗುಂಡ್ಲುಪೇಟೆ ಕ್ಷೇತ್ರ ಕೂಡ ತೆರವಾಗಿದ್ದು, ಒಂದು ವೇಳೆ ಆ ಕ್ಷೇತ್ರಕ್ಕೂ ಚುನಾವಣೆ ಘೋಷಣೆಯಾದರೆ ಪ್ರಸಾದ್ ಅವರ ಕುಟುಂಬದವರನ್ನು ಚುನಾವಣಾ ಕಣಕ್ಕಿಳಿಸಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಧೃವ ನಾರಾಯಣ್ ಹೇಳಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin