ಬೆಂಗಳೂರಿನ ಇಗ್ನೆಸ್ ಕಂಪನಿ ಮೇಲೆ ಇಡಿ ದಾಳಿ : 6.50 ಕೋಟಿ ಅಕ್ರಮ ಆಸ್ತಿ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ED-Department

ಬೆಂಗಳೂರು,ಜ.5-ನೋಟು ನಿಷೇಧದ ಹಿನ್ನೆಲೆಯಲ್ಲಿ ಕಾಳಧನಿಕರ ಬೆನ್ನು ಬಿದ್ದಿರುವ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಇಂದು ಬೆಂಗಳೂರಿನ ಇಗ್ನೆಸ್ ಟೆಕ್ನಾಲಜಿ ಸಲ್ಯೂಷನ್ ಕಂಪನಿ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಬೆಂಗಳೂರಿನ ವಿವಿಧೆಡೆಗಳಲ್ಲಿರುವ ಕಂಪನಿಯ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿದ ಇಡಿ ಅಧಿಕಾರಿಗಳು, 6.50 ಕೋಟಿ ಅಕ್ರಮ ಆಸ್ತಿ ಪತ್ತೆಹಚ್ಚಿದ್ದಾರೆ. ಷೇರು, ನಿವೇಶನ, ಕಟ್ಟಡ ಸೇರಿದಂತೆ ಹಲವು ಬಗೆಯ ಅಕ್ರಮ ಅಸ್ತಿಗಳನ್ನು ಇಡಿ ವಶಕ್ಕೆ ಪಡೆದುಕೊಂಡಿದೆ.  ಇದರೊಂದಿಗೆ ಮಹತ್ವದ ದಾಖಲೆಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ವಿರುದ್ಧದ 2002ರ ಕಾಯ್ದೆಯಡಿ ಇಗ್ನೆಸ್ ಟೆಕ್ನಾಲಜಿ ಕಂಪನಿ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin