ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಕ್ಕಿಜ್ವರ ಭೀತಿ

ಈ ಸುದ್ದಿಯನ್ನು ಶೇರ್ ಮಾಡಿ

Hakki-jwara

ಮಂಗಳೂರು, ಜ.6– ಕೇರಳ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಕ್ಕಿಜ್ವರ ಭೀತಿ ಆವರಿಸಿದೆ. ಹೀಗಾಗಿ ಕರಾವಳಿ ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.  ಜಿಲ್ಲೆಯಾದ್ಯಂತ ಕೋಳಿಫಾರಂಗಳಿಂದ ನಿಯಮಿತವಾಗಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ಕುರಿತು ಮಾತನಾಡಿದ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಟಿ.ತಿಪ್ಪೇಸ್ವಾಮಿ, ಈಗಾಗಲೇ ಪಿಲಿಕುಳ ನಿಸರ್ಗ ಧಾಮದ ಅಧಿಕಾರಿಗಳು ಹಾಗೂ ಜಿಲ್ಲೆಯ ಕೋಳಿ ಸಾಕಾಣಿಕೆದಾರರ ತುರ್ತು ಸಭೆ ನಡೆಸಲಾಗಿದೆ. ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದರಿಂದ ಕೋಳಿ ಫಾರಂಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ. ಇತ್ತ ಮೈಸೂರಿನಲ್ಲಿರುವ ಮೃಗಾಲಯವನ್ನು ಬಂದ್ ಮಾಡಲಾಗಿದೆ.

ಹಕ್ಕಿಜ್ವರದ ಹಿನ್ನೆಲೆಯಲ್ಲಿ ಇಲ್ಲಿರುವ ಹಕ್ಕಿ-ಪಕ್ಷಿಗಳು ಸಾಯುತ್ತಿರುವುದರಿಂದ ಬಂದ್ ಮಾಡಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಈ ನಡುವೆ ಇಲ್ಲಿ ಮತ್ತೊಂದು ಪೆಲಿಕಾನ್ ಎಂಬ ಪಕ್ಷಿ ಸಾವನ್ನಪ್ಪಿದೆ. ಈವರೆಗೆ ಹಕ್ಕಿಜ್ವರಕ್ಕೆ ಬಲಿಯಾದ ಪಕ್ಷಿಗಳ ಸಂಖ್ಯೆ 5ಕ್ಕೇರಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1500 ರಿಂದ 2000 ಕೋಳಿ ಸಾಕಾಣಿಕೆದಾರರಿದ್ದಾರೆ. ಲಕ್ಷಾಂತರ ಕೋಳಿಗಳನ್ನು ಸಾಕಿ ಪ್ರತಿದಿನ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಹಕ್ಕಿಜ್ವರ ಭೀತಿಯಿಂದ ಆತಂಕಕ್ಕೀಡಾಗಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin