ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಗೆ ಕೈನಿಂದ ಕಣಕ್ಕಿಳಿಯಲಿದ್ದಾರೆ ಮಹಿಳೆಯರು..?

ಈ ಸುದ್ದಿಯನ್ನು ಶೇರ್ ಮಾಡಿ

Pushpa

ಬೆಂಗಳೂರು, ಜ.7- ಸಚಿವ ಮಹದೇವ ಪ್ರಸಾದ್ ಅವರ ನಿಧನದಿಂದ ತೆರವಾದ ಗುಂಡ್ಲುಪೇಟೆ ಹಾಗೂ ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆಯಿಂದ ತೆರವಾಗಿರುವ ನಂಜನಗೂಡು ಎರಡೂ ಕ್ಷೇತ್ರಗಳ ಉಪಚುನಾವಣೆಗೆ ಮಹಿಳೆಯರನ್ನು ಕಣಕ್ಕಿಳಿಸುವ ದಾಳ ಉರುಳಿಸಲು ಸಿಎಂ ಸಿದ್ದರಾಮಯ್ಯ ತಂತ್ರ ಹೆಣೆದಿದ್ದಾರೆ.  ಗುಂಡ್ಲುಪೇಟೆ ಕ್ಷೇತ್ರಕ್ಕೆ ಮಹದೇವ ಪ್ರಸಾದ್ ಅವರ ಪತ್ನಿ ಗೀತಾ ಹಾಗೂ ನಂಜನಗೂಡು ಕ್ಷೇತ್ರಕ್ಕೆ ಜಿಪಂ ಮಾಜಿ ಅಧ್ಯಕ್ಷ ಡಾ.ಪುಷ್ಪಾ ಅಮರನಾಥ್ ಅವರನ್ನು ಕಣಕ್ಕಿಳಿಸಬೇಕೆಂಬ ಪ್ರಯತ್ನ ಆರಂಭವಾಗಿದೆ. ರಾಜಕೀಯ ಪ್ರವೇಶಕ್ಕೆ ಮಹದೇವ ಪ್ರಸಾದ್ ಅವರ ಪತ್ನಿ ಗೀತಾ ಆಸಕ್ತಿ ತೋರಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಗುಂಡ್ಲುಪೇಟೆ ಕ್ಷೇತ್ರದ ಉಪಚುನಾವಣೆಗೆ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್ ಅವರ ನಾದಿನಿಯಾಗಿರುವ ಪುಷ್ಪಾ ಅಮರನಾಥ್ ಅವರನ್ನು ಕಣಕ್ಕಿಳಿಸಲು ಸ್ವತಃ ಸಿದ್ದರಾಮಯ್ಯನವರೇ ಆಸಕ್ತಿ ವಹಿಸಿ ಮಂಜುನಾಥ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಮಹಿಳೆಯರನ್ನು ಕಣಕ್ಕಿಳಿಸಿ ಜಯಭೇರಿ ಬಾರಿಸಬೇಕೆಂಬುದು ಸಿಎಂ ತಂತ್ರಗಾರಿಕೆಯಾಗಿದೆ.  ಗುಂಡ್ಲುಪೇಟೆ ಕ್ಷೇತ್ರದಲ್ಲಿ ಮಹದೇವ ಪ್ರಸಾದ್ ಅವರ ಅನುಕಂಪದ ಅಲೆಯನ್ನು ಗೆಲುವನ್ನಾಗಿಸಿಕೊಳ್ಳುವ ತಂತ್ರಗಾರಿಕೆ ಜತೆಗೆ ನಂಜನಗೂಡು ಕ್ಷೇತ್ರದಲ್ಲಿ ಮಹಿಳೆಯರ ಮತಗಳನ್ನು ಸೆಳೆಯುವ ಮೂಲಕ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದು ಮುಖ್ಯಮಂತ್ರಿಯವರ ಚುನಾವಣಾ ರಣನೀತಿಯಾಗಿದೆ ಎಂದು ತಿಳಿದುಬಂದಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin