ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ 60 ತಿಂಗಳುಗಳ ವರೆಗೆ 50 ಸಾವಿರ ಪರಿಹಾರ ನೀಡುವಂತೆ ಆದೇಶ..!

ಈ ಸುದ್ದಿಯನ್ನು ಶೇರ್ ಮಾಡಿ
Sexual
ಸಾಂಧರ್ಭಿಕ ಚಿತ್ರ

ಬೆಂಗಳೂರು,ಜ.7-ಸಹೋದ್ಯೋಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಸಾಫ್ಟ್ವೇರ್ ಕಂಪನಿಯೊಂದರ ಹಿರಿಯ ವ್ಯವಸ್ಥಾಪಕನೊಬ್ಬನಿಗೆ 5 ವರ್ಷಗಳ ಕಾಲ (60 ತಿಂಗಳು) 50,000 ರೂ. ಪರಿಹಾರ ನೀಡುವಂತೆ ರಾಜ್ಯ ಕಾರ್ಮಿಕ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.   ಇದರೊಂದಿಗೆ ಕೆಲಸ ಮಾಡುವ ಸ್ಥಳದಲ್ಲೇ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ನೀಡುವವರಿಗೆ ಸ್ಪಷ್ಟ ಎಚ್ಚರಿಕೆ ಸಂದೇಶ ರವಾನಿಸಿದೆ. ಬೆಂಗಳೂರಿನ ಮಹದೇವಪುರದ ಐಪಿ ಇನ್‍ಫ್ಯೂಶನ್ ಸಾಫ್ಟ್‍ವೇರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಮಹಿಳಾ ಉದ್ಯೋಗಿಯೊಬ್ಬರು ಸಂಸ್ಥೆಯ ಹಿರಿಯ ವ್ಯವಸ್ಥಾಪಕ(ಮಾನವ ಸಂಪನ್ಮೂಲ) ಭರತ್ ಚಂದ್ರಶೇಖರ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಾರ್ಮಿಕ ಇಲಾಖೆಗೆ ದೂರು ನೀಡಿದ್ದರು.

ಈ ಕುರಿತ ವಾದ-ಪ್ರತಿವಾದಗಳು ಆಲಿಸಿದ ನಂತರ ಕಾರ್ಮಿಕ ಇಲಾಖೆಯ ಹೆಚ್ಚುವರಿ ಆಯುಕ್ತ ಟಿ.ಶ್ರೀನಿವಾಸ್ ಈ ಆದೇಶ ಹೊರಡಿಸಿ 5 ವರ್ಷಗಳ ಕಾಲ ಮಾಸಿಕ ಪರಿಹಾರ ನೀಡುವಂತೆ ಅವರು ಸೂಚಿಸಿದ್ದಾರೆ.   ಕೆಲಸ ಮಾಡುವ ಕಂಪನಿಗಳಲ್ಲಿ ಮಹಿಳಾ ಉದ್ಯೋಗಿಗಳ ಹಕ್ಕು ರಕ್ಷಣೆ ಉಲ್ಲಂಘನೆಯಾಗಿದೆ. ಇದಕ್ಕೆ ಕಂಪನಿಯೂ ಹೊಣೆಗಾರರಾಗಬೇಕಾಗುತ್ತದೆ. ಮಹಿಳಾ ಉದ್ಯೋಗಿಗಳಿಗೆ ಸುರಕ್ಷಿತ ವಾತಾವರಣ ನಿರ್ಮಿಸಕೊಡಬೇಕಾಗಿರುವುದು ಕಂಪನಿಯ ಜವಾಬ್ದಾರಿಯಾಗಿದೆ ಎಂದು ಹೇಳಿರುವ ಅವರು, ಪ್ರತ್ಯೇಕವಾಗಿ ಸಂತ್ರಸ್ತೆಗೆ ಕಂಪನಿಯಿಂದ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin