ವೈದ್ಯರ ಮೇಲೆ ಸಂಸದರ ಹಲ್ಲೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Anant-Kumar-Hegde1

ದಕ್ಷಿಣ ಕನ್ನಡ, ಜ.7- ತನ್ನ ತಾಯಿಗೆ ಚಿಕಿತ್ಸೆ ನೀಡಲು ವಿಳಂಬ ಮಾಡಿದರೆಂದು ವೈದ್ಯರ ಮೇಲೆ ಸಂಸದ ಅನಂತ್‍ಕುಮಾರ್ ಹೆಗಡೆ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಇಂದು ಜಿಲ್ಲೆಯಾದ್ಯಂತ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ಎರಡು ಗಂಟೆಗಳ ಕಾಲ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.  ಜ.2ರಂದು ಟಿಟಿಎಸ್ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ಸಂಸದರು ಹಲ್ಲೆ ಮಾಡಿದ ಘಟನೆಯನ್ನು ಖಂಡಿಸಿ ಇಂದು ವೈದ್ಯರು ಸಾಂಕೇತಿಕವಾಗಿ ಪ್ರತಿಭಟಿಸಿದರು.  ಕರ್ತವ್ಯನಿರತ ವೈದ್ಯರ ಮೇಲೆ ನಿರಂತರವಾಗಿ ಹಲ್ಲೆ ನಡೆದರೆ ವೃತ್ತಿ ನಿರ್ವಹಿಸಲು ಕಷ್ಟಸಾಧ್ಯವಾಗುತ್ತದೆ. ಜನಪ್ರತಿನಿಧಿಗಳಾದವರು ಜನರಿಗೆ ರಕ್ಷಣೆ ಕೊಡಬೇಕು. ಆದರೆ, ತಾವೇ ಈ ರೀತಿ ವರ್ತಿಸಿದರೆ ನಾವು ಎಲ್ಲಿ ಹೋಗಬೇಕು ಎಂದು ವೈದ್ಯರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.

ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ಎರಡು ಗಂಟೆಗಳ ಕಾಲ ಬಂದ್ ಮಾಡಿ ಪ್ರತಿಭಟನೆ ಮಾಡಿ ಘಟನೆಯನ್ನು ಖಂಡಿಸಲಾಯಿತು.  ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಘಟನೆ ವಿರೋಧಿಸಿ ಸಂಸದ ಅನಂತ್‍ಕುಮಾರ್ ಹೆಗಡೆ ಕೃತ್ಯವನ್ನು ಖಂಡಿಸಲಾಯಿತು.   ಭಯದ ವಾತಾವರಣದಲ್ಲಿ ವೈದ್ಯರು ಕೆಲಸ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಮಧ್ಯ ಪ್ರವೇಶಿಸಿ ನಮ್ಮ ನೆರವಿಗೆ ಬರಬೇಕು. ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin